ಬೆಳಗಾವಿ ಗಡಿ ವಿವಾದ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಫಡ್ನವೀಸ್ ಪ್ರಚೋದನಾಕಾರಿ ಹೇಳಿಕೆ- ಸಿಎಂ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ , ಫಡ್ನವೀಸ್ ಎರಡೂ ರಾಜ್ಯಗಳ ನಡುವಿನ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಫಡ್ನವೀಸ್ ಅವರ ಕನಸುಗಳು ಎಂದಿಗೂ ನನಸಾಗುವುದಿಲ್ಲ. ಕರ್ನಾಟಕ ರಾಜ್ಯವು ತನ್ನ ನೆಲ ಜಲ ಮತ್ತು ಗಡಿಗಳನ್ನು ರಕ್ಷಿಸಲು ಬದ್ಧವಾಗಿದೆ ಎಂದಿದ್ದಾರೆ. 
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಫಡ್ನವೀಸ್ ಸಾಂದರ್ಭಿಕ ಚಿತ್ರ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಫಡ್ನವೀಸ್ ಸಾಂದರ್ಭಿಕ ಚಿತ್ರ
Updated on

ಬೆಳಗಾವಿ: ಮಹಾರಾಷ್ಟ್ರದ ಒಂದೇ ಒಂದು ಗ್ರಾಮ, ಪಟ್ಟಣವನ್ನು ಕರ್ನಾಟಕದಲ್ಲಿ ವಿಲೀನಗೊಳಿಸುವುದಿಲ್ಲ ಎಂಬ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಬುಧವಾರ ಸರಣಿ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ , ಫಡ್ನವೀಸ್ ಎರಡೂ ರಾಜ್ಯಗಳ ನಡುವಿನ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಫಡ್ನವೀಸ್ ಅವರ ಕನಸುಗಳು ಎಂದಿಗೂ ನನಸಾಗುವುದಿಲ್ಲ. ಕರ್ನಾಟಕ ರಾಜ್ಯವು ತನ್ನ ನೆಲ ಜಲ ಮತ್ತು ಗಡಿಗಳನ್ನು ರಕ್ಷಿಸಲು ಬದ್ಧವಾಗಿದೆ ಎಂದಿದ್ದಾರೆ. 

ಕಳೆದ ಕೆಲವು ದಶಕಗಳಿಂದ ಗಡಿಯಲ್ಲಿರುವ ಹಲವಾರು ಪ್ರದೇಶಗಳನ್ನು ಪರಸ್ಪರ ವರ್ಗಾಯಿಸುವ ವಿಚಾರದಲ್ಲಿ ಎರಡೂ ರಾಜ್ಯಗಳು ಜಗಳವಾಡುತ್ತಿವೆ. 2004 ರಲ್ಲಿ ಕರ್ನಾಟಕದ ಹಲವಾರು ಪ್ರದೇಶಗಳನ್ನು ಮಹಾರಾಷ್ಟ್ರದೊಂದಿಗೆ ವಿಲೀನಗೊಳಿಸುವಂತೆ ಒತ್ತಾಯಿಸಿ ಮಹಾರಾಷ್ಟ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಹೋದಾಗ ಎರಡೂ ರಾಜ್ಯಗಳ ನಡುವಿನ ಗಡಿ ವಿವಾದದ ವಿಷಯವು ಗಂಭೀರ ಸ್ವರೂಪವನ್ನು ಪಡೆದುಕೊಂಡಿತು. ಪ್ರಕರಣದ ವಿಚಾರಣೆಯನ್ನು ನಿಗದಿಪಡಿಸಲಾಗಿದ್ದು, ಕಳೆದ ಕೆಲವು ದಿನಗಳಿಂದ ವಿವಾದದ ಕುರಿತು ಹೇಳಿಕೆಗಳನ್ನು ನೀಡುವಲ್ಲಿ ಎರಡೂ ಸರ್ಕಾರಗಳು ತೊಡಗಿವೆ.

  ಮಹಾರಾಷ್ಟ್ರದಿಂದ ಒಂದು ಹಳ್ಳಿ/ಪಟ್ಟಣ ಕೂಡ ಕರ್ನಾಟಕಕ್ಕೆ ಹೋಗುವುದಿಲ್ಲ. ಬೆಳಗಾವಿ, ಕಾರವಾರ, ನಿಪ್ಪಾಣಿ ಮತ್ತು ಗಡಿಯಲ್ಲಿರುವ ಇತರ ಮರಾಠಿ ಪ್ರದೇಶಗಳ ಮೇಲೆ ಹಕ್ಕು ಸಾಧಿಸಲು ಮಹಾರಾಷ್ಟ್ರ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಬಲವಾಗಿ ಹೋರಾಡಲಿದೆ  ಎಂಬ ಫಡ್ನವೀಸ್‌ರ ಟ್ವೀಟ್‌ನಿಂದ ಕೆರಳಿದ ಬೊಮ್ಮಾಯಿ, ತಮ್ಮ ಸರಣಿ ಟ್ವೀಟ್‌ಗಳಲ್ಲಿ ಕಠಿಣವಾಗಿ ಪ್ರತಿಕ್ರಿಯಿಸಿದ್ದಾರೆ.``ಕರ್ನಾಟಕವು ತನ್ನ ಭೂಮಿಯನ್ನು ಯಾರಿಗೂ ನೀಡುವ ಪ್ರಶ್ನೆಯೇ ಇಲ್ಲ. ಮಹಾರಾಷ್ಟ್ರದ ಕನ್ನಡ ಬಹುಸಂಖ್ಯಾತ ಪ್ರದೇಶಗಳಾದ ಅಕ್ಕಲಕೋಟೆ, ಸೊಲ್ಲಾಪುರವನ್ನು ಕರ್ನಾಟಕಕ್ಕೆ ಸೇರಿಸಬೇಕೆಂಬುದು ನಮ್ಮ ಆಗ್ರಹವಾಗಿದೆ ಎಂದು ಹೇಳಿದ್ದಾರೆ.

   ಗಡಿ ವಿವಾದದ ಕುರಿತು 2004 ರಲ್ಲಿ ಸುಪ್ರೀಂ ಕೋರ್ಟ್‌ಗೆ ತೆರಳುವ ಮೂಲಕ ಮಹಾರಾಷ್ಟ್ರ ಸರ್ಕಾರವು ಗಡಿ ವಿವಾದವನ್ನು ಕೆರಳಿಸಿತು ಆದರೆ ಅದು ತನ್ನ ಗುರಿಯನ್ನು ಸಾಧಿಸಲು ಸಾಧ್ಯವಾಗಲಿಲ್ಲ ಎಂದು ಅವರು ಟ್ವೀಟ್ ಮಾಡಿದ್ದಾರೆ. ಭವಿಷ್ಯದಲ್ಲಿಯೂ ನೆರೆಯ ಸರ್ಕಾರ ಯಶಸ್ವಿಯಾಗುವುದಿಲ್ಲ. ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಗಂಭೀರವಾಗಿ ಕಾನೂನು ಹೋರಾಟ ನಡೆಸಲು ನಾವು (ಕರ್ನಾಟಕ) ಬದ್ಧರಾಗಿದ್ದೇವೆ ಎಂದು ಬೊಮ್ಮಾಯಿ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com