ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ: ಅಮೃತ್ ಪಾಲ್ ಜಾಮೀನು ಅರ್ಜಿ ವಜಾ

545 ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದ ಆರೋಪಿಯಾಗಿರುವ ಎಡಿಜಿಪಿ ಆಗಿದ್ದ ಅಮೃತ್ ಪಾಲ್ ಜಾಮೀನು ಅರ್ಜಿ ಮತ್ತೆ  ವಜಾಗೊಂಡಿದ್ದು ಅಮೃತ್ ಪೌಲ್​ಗೆ ಜೈಲೇ ಗತಿಯಾಗಿದೆ.
ಅಮೃತ್ ಪೌಲ್
ಅಮೃತ್ ಪೌಲ್

ಬೆಂಗಳೂರು: 545 ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದ ಆರೋಪಿಯಾಗಿರುವ ಎಡಿಜಿಪಿ ಆಗಿದ್ದ ಅಮೃತ್ ಪಾಲ್ ಜಾಮೀನು ಅರ್ಜಿ ಮತ್ತೆ  ವಜಾಗೊಂಡಿದ್ದು ಅಮೃತ್ ಪೌಲ್​ಗೆ ಜೈಲೇ ಗತಿಯಾಗಿದೆ.

ಬೆಂಗಳೂರಿನ 24ನೇ ಸಿಸಿಹೆಚ್ ನ್ಯಾಯಾಲಯದ ನ್ಯಾಯಮೂರ್ತಿ ಕೆ. ಲಕ್ಷ್ಮಿ ನಾರಾಯಣ ಭಟ್ ಅವರು ಜಾಮೀನು ತಿರಸ್ಕರಿಸಿ ಆದೇಶ ಹೊರಡಿಸಿದರು.

ಪಿಎಸ್ಐ ನೇಮಕಾತಿಯ ಉಸ್ತುವಾರಿ ವಹಿಸಿದ್ದ ಅಮೃತ್ ಪಾಲ್ ಬಳಿ ಸೇಫ್ ಲಾಕರ್​​ನ ಕೀ ಇತ್ತು. ಇದನ್ನು ಕಿರಿಯ ಅಧಿಕಾರಿಗಳಿಗೆ ಕೊಟ್ಟು ದುರುಪಯೋಗ ಮಾಡಿಕೊಂಡಿದ್ದಾರೆ ಎಂಬ ಆರೋಪವಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೃತ್ ಪಾಲ್  ಈ ಹಿಂದೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯ ವಜಾಗೊಳಿಸಿತ್ತು. ಇದೀಗ ಬೆಂಗಳೂರಿನ 24ನೇ ಸಿಸಿಹೆಚ್ ಕೋರ್ಟ್ ಸಹ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

ಎಡಿಜಿಪಿ ಅಮೃತ್ ಪೌಲ್ ಹಾಗೂ ಆರೋಪಿ ಶಾಂತಕುಮಾರ್ ನಡುವೆ 1.36 ಕೋಟಿ ರೂಪಾಯಿ ಹಣ ವರ್ಗಾವಣೆ ಆಗಿದೆ. ಇನ್ನು ಮೊಬೈಲ್ ದತ್ತಾಂಶವನ್ನು ಅಳಿಸಿ ಹಾಕಲಾಗಿದೆ ಎಂದು ಸಿಐಡಿ ಆರೋಪಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸತತ ಮೂರು ಬಾರಿ ವಿಚಾರಣೆ ಎದುರಿಸಿದ್ದ ಅಮೃತ್ ಪೌಲ್ ರನ್ನು ಕಳೆದ ಜುಲೈ 4ರಂದು ಸಿಐಡಿ ಅಧಿಕೃತವಾಗಿ ಬಂಧಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com