2023ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟ
ಬೆಂಗಳೂರು: 2022-23ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಸೋಮವಾರ ಪ್ರಕಟಿಸಿದೆ.
ಮಾರ್ಚ್ 9 ರಿಂದ ಮಾರ್ಚ್ 29ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿವೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.
ಪರೀಕ್ಷಾ ವೇಳಾಪಟ್ಟಿ
ಮಾರ್ಚ್ 9 ರಂದು ಕನ್ನಡ
ಮಾರ್ಚ್ 11ಕ್ಕೆ ಗಣಿತ, ಶಿಕ್ಷಣ
ಮಾರ್ಚ್ 13, ಅರ್ಥಶಾಸ್ತ್ರ
ಮಾರ್ಚ್ 14, ರಸಯಾನಶಾಸ್ತ್ರ, ಮನಶಾಸ್ತ್ರ, ಕರ್ನಾಟಕ ಸಂಗೀತ , ಹಿಂದುಸ್ತಾನಿ ಸಂಗೀತ, ಮೂಲಗಣಿತ
ಮಾರ್ಚ್ 15 , ಪ್ರಥಮ ಭಾಷೆ ಪರೀಕ್ಷೆ; ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಮಾರ್ಚ್ 16, ತರ್ಕ ಶಾಸ್ತ್ರ, ವ್ಯವಹಾರ ಅಧ್ಯಯನ
ಮಾರ್ಚ್ 17, ಮಾಹಿತಿ ತಂತ್ರಜ್ಜಾನ, ರಿಟೈಲ್ , ಆಟೋಮೊಬೈಲ್, ಹೆಲ್ತ್ ಕೆರ್,ಬ್ಯೂಟಿ ಅಂಡ್ ವೆಲ್ ನೆಸ್
ಮಾರ್ಚ್ 18, ಭೂಗೋಳ ಶಾಸ್ತ್ರ, ಜೀವಶಾಸ್ತ್ರ
ಮಾರ್ಚ್ 20, ಇತಿಹಾಸ, ಭೌತಶಾಸ್ತ್ರ
ಮಾರ್ಚ್ 21, ಹಿಂದಿ
ಮಾರ್ಚ್ 23, ಇಂಗ್ಲೀಷ್
ಮಾರ್ಚ್ 25, ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಮಾರ್ಚ್ 27, ಐಚ್ಚಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ,ಗೃಹ ವಿಜ್ಞಾನ
ಮಾರ್ಚ್ 29, ಸಮಾಜಶಾಸ್ತ್ರ,ವಿದ್ಯುನ್ಮಾನ ಶಾಸ್ತ್ರ,ಗಣಕ ವಿಜ್ಞಾನ
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ