ಕೊಡಗು: ಹಸುವಿಯೊಂದಿಗೆ ಅಸಹಜ ಸೆಕ್ಸ್ ನಡೆಸಿದ್ದ ವ್ಯಕ್ತಿ ಬಂಧನ

ಕೊಡಗಿನ ಸುಂಟಿಕೊಪ್ಪದಲ್ಲಿ ಹಸುವಿನ ಜೊತೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಮತ್ತು ಆತನ ವಿರುದ್ಧ ಐಪಿಸಿ ಸೆಕ್ಷನ್ 377 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕೊಡಗು: ಕೊಡಗಿನ ಸುಂಟಿಕೊಪ್ಪದಲ್ಲಿ ಹಸುವಿನ ಜೊತೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಮತ್ತು ಆತನ ವಿರುದ್ಧ ಐಪಿಸಿ ಸೆಕ್ಷನ್ 377 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬಂಧಿತ ಆರೋಪಿಯನ್ನು ಅಬೂಬಕ್ಕರ್‌ ಸಿದ್ದಿಕಿ(40) ಎಂದು ಗುರುತಿಸಲಾಗಿದ್ದು, ಕಳೆದ ಭಾನುವಾರ ಹೊಲದಲ್ಲಿ 
ಮೇಯುತ್ತಿದ್ದ ಹಸುವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ್ದಾನೆ ಎಂದು ಆರೋಪಿಸಿ ಹಸುವಿನ ಮಾಲೀಕ ದೇವಯ್ಯ ಪೊಲೀಸರಿಗೆ ದೂರು ನೀಡಿದ್ದರು.

ಈ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಅಬುಬಕ್ಕರ್ ನನ್ನು ಬಂಧಿಸಿದ್ದಾರೆ ಮತ್ತು ಹಸುವನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿ ತನಿಖೆ ಮುಂದುವರಿಸಿದ್ದಾರೆ.

ಸುಂಟಿಕೊಪ್ಪ ಸಂತೆಗೆ ಹೋಗಿ ವಾಪಸ್ ಮನೆಗೆ ಬರುತ್ತಿದ್ದಾಗ ದಾರಿಯಲ್ಲಿ ಒಂದು ಕೆಂಪು ಬಣ್ಣದ ಕೆಎ -09-6223 ಹೀರೋ ಹೋಂಡಾ ಪ್ಯಾಷನ್ ಪ್ರೋ ಬೈಕ್​ ನಿಂತಿದ್ದನ್ನು ಗಮನಿಸಿದ ದೇವಯ್ಯ, ಹೊಲದ ಬಳಿ ಹೋದಾಗ ಅಬೂಬಕ್ಕರ್‌ ಸಿದ್ದಿಕಿ ಹಸುವಿನೊಂದಿಗೆ ಸಂಭೋಗ ನಡೆಸುತ್ತಿದ್ದ ಎಂದು ಆರೋಪಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com