

ಮೈಸೂರು: ರಾಹುಲ್ ಗಾಂಧಿ ನೇತೃತ್ವದಲ್ಲಿ ಬಿಜೆಪಿ ಆಡಳಿತವಿರುವ ಕರ್ನಾಟಕದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಗೆ ಅಭೂತಪೂರ್ವಕ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಯಲ್ಲಿ ಅಪಾರ ಜನ ಬೆಂಬಲ ಸಿಕ್ಕಿರುವುದಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.
ಐತಿಹಾಸಿಕ ಯಾತ್ರೆಯಲ್ಲಿ ಜನರು ಹೆಚ್ಚಾಗಿ ಪಾಲ್ಗೊಳ್ಳಲು ಆಸಕ್ತಿ ತೋರುತ್ತಿದ್ದಾರೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಅಕ್ಟೋಬರ್ 6 ರಿಂದ ಮಂಡ್ಯದಿಂದ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.