ಧರ್ಮ ಮಾನವೀಯ ಮೌಲ್ಯಗಳನ್ನು ಬಲಪಡಿಸುತ್ತದೆ: ರಂಭಾಪುರಿ ಶ್ರೀ

ಧರ್ಮವು ಮಾನವೀಯ ಮೌಲ್ಯಗಳನ್ನು ಬಲಪಡಿಸುತ್ತದೆ ಎಂದು ರಂಭಾಪುರಿ ಪೀಠದ ವೀರಸೋಮೇಶ್ವರ ಸ್ವಾಮೀಜಿ ಅವರು ಗುರುವಾರ ಹೇಳಿದ್ದಾರೆ.
ರಂಭಾಪುರಿ ಶ್ರೀ
ರಂಭಾಪುರಿ ಶ್ರೀ
Updated on

ಹಾಸನ: ಧರ್ಮವು ಮಾನವೀಯ ಮೌಲ್ಯಗಳನ್ನು ಬಲಪಡಿಸುತ್ತದೆ ಎಂದು ರಂಭಾಪುರಿ ಪೀಠದ ವೀರಸೋಮೇಶ್ವರ ಸ್ವಾಮೀಜಿ ಅವರು ಗುರುವಾರ ಹೇಳಿದ್ದಾರೆ.

ಇಂದು ಬೇಲೂರು ಪಟ್ಟಣದಲ್ಲಿ ದಸರಾ ಮಹೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಮಾವೇಶದಲ್ಲಿ ಭಕ್ತಾದಿಗಳನ್ನು ಉದ್ದೇಶಿಸಿ ಮಾತನಾಡಿದ ಸ್ವಾಮೀಜಿ, ಶಾಂತಿ ಸೌಹಾರ್ದತೆ ಕಾಪಾಡಲು ಧಾರ್ಮಿಕ ಮುಖಂಡರು ಪ್ರಾಮಾಣಿಕವಾಗಿ ಶ್ರಮಿಸಿದ್ದಾರೆ. ಸಮಾಜದಿಂದ ಹಿಂಸೆಯನ್ನು ದೂರವಿಡಲು ಜನರು ಸಹ ಸಂತರು ಮತ್ತು ಧಾರ್ಮಿಕ ಮುಖಂಡರ ಚಿಂತನೆಗಳನ್ನು ಅನುಸರಿಸಬೇಕು ಎಂದು ಹೇಳಿದರು.

ಈ ವೇಳೆ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು, ರಾಷ್ಟ್ರೀಯ ಶಿಕ್ಷಣ ನೀತಿಯ ಮಹತ್ವವನ್ನು ತಿಳಿಸಿದರು ಮತ್ತು ನಿರ್ಲಕ್ಷ್ಯಕ್ಕೊಳಗಾದ ಜನರನ್ನು ಮುಖ್ಯವಾಹಿನಿಗೆ ತರಲು ಶಿಕ್ಷಣ ಅತ್ಯಗತ್ಯ ಎಂದರು. 

ನಂತರ ಭಕ್ತರು ಅಡ್ಡಪಲ್ಲಕ್ಕಿ ಉತ್ಸವವನ್ನು ಏರ್ಪಡಿಸಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಅಲಂಕೃತ ರಥದಲ್ಲಿ ಸ್ವಾಮೀಜಿಯ ಮೆರವಣಿಗೆ ನಡೆಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com