ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ಮೀಸಲಾತಿ: ಸರ್ವಪಕ್ಷ ಸಭೆಯಲ್ಲಿ ಜಸ್ಟೀಸ್ ನಾಗಮೋಹನ್ ದಾಸ್ ಸಮಿತಿ ವರದಿ ಚರ್ಚೆ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ (SC-ST) ಸೇರಿದ ಜಾತಿಗಳಿಗೆ ಮೀಸಲಾತಿ ನಿಗದಿಪಡಿಸುವ ಕುರಿತು ನ್ಯಾಯಮೂರ್ತಿ ನಾಗಮೋಹನ್​ ದಾಸ್ ನೇತೃತ್ವದ ಸಮಿತಿ ಸಲ್ಲಿಸಿದ್ದ ವರದಿಯ ವಿಸ್ತೃತ ಚರ್ಚೆ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಶುಕ್ರವಾರ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಸರ್ವಪಕ್ಷ ಸಭೆ ನಡೆಯಿತು.
ಸರ್ವಪಕ್ಷ ಸಭೆಯಲ್ಲಿ ಸಿಎಂ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿಗಳು
ಸರ್ವಪಕ್ಷ ಸಭೆಯಲ್ಲಿ ಸಿಎಂ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿಗಳು
Updated on

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ (SC-ST) ಸೇರಿದ ಜಾತಿಗಳಿಗೆ ಮೀಸಲಾತಿ ನಿಗದಿಪಡಿಸುವ ಕುರಿತು ನ್ಯಾಯಮೂರ್ತಿ ನಾಗಮೋಹನ್​ ದಾಸ್ ನೇತೃತ್ವದ ಸಮಿತಿ ಸಲ್ಲಿಸಿದ್ದ ವರದಿಯ ವಿಸ್ತೃತ ಚರ್ಚೆ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಶುಕ್ರವಾರ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಸರ್ವಪಕ್ಷ ಸಭೆ ನಡೆಯಿತು.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ, ಚಿವರಾದ ಗೋವಿಂದ ಕಾರಜೋಳ, ಆರ್‌‌. ಅಶೋಕ, ಜೆ.ಸಿ. ಮಾಧುಸ್ವಾಮಿ, ಬಿ.ಶ್ರೀರಾಮುಲು, ಕೋಟ ಶ್ರೀನಿವಾಸ ಪೂಜಾರಿ, ಎಸ್. ಆಂಗಾರ, ಆನಂದಸಿಂಗ್, ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಯು.ಟಿ. ಖಾದರ್, ವಿಧಾನಸಭೆ ಪ್ರತಿಪಕ್ಷದ ಮುಖ್ಯಸಚೇತಕ ವಿಧಾನ ಪರಿಷತ್ ಪ್ರತಿಪಕ್ಷದ ಮುಖ್ಯಸಚೇತಕ ಪ್ರಕಾಶ್ ರಾಠೋಡ್, ಮಾಜಿ ಸಚಿವ ಸತೀಶ್ ಜಾರಕಿಹೊಳಿ, ಮಾಜಿ ಸಂಸದ ವಿ.ಎಸ್. ಉಗ್ರಪ್ಪ, ವಿಧಾನಪರಿಷತ್ ಸದಸ್ಯ ಭೋಜೆಗೌಡ, ರಾಜ್ಯ ಸರ್ಕಾರದ ಅಡ್ವಕೇಟ್ ಜನರಲ್ ಪ್ರಭುಲಿಂಗ ನಾವಡಗಿ ಹಾಗೂ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು. 

ನಾಗಮೋಹನ್ ದಾಸ್ ಸಮಿತಿಯು ಎಸ್​ಸಿ ಮೀಸಲಾತಿಯನ್ನು ಶೇಕಡಾ 15 ರಿಂದ ಶೇಕಡಾ 17ಕ್ಕೆ, ಎಸ್​ಟಿ ಮೀಸಲಾತಿಯನ್ನು ಶೇಕಡಾ 3ರಿಂದ ಶೇಕಡಾ 7ಕ್ಕೆ ಹೆಚ್ಚಿಸಲು ಶಿಫಾರಸು ಮಾಡಿದೆ. ಎಸ್‌ಟಿಗೆ ನಿಗದಿಪಡಿಸಿರುವ ಮೀಸಲಾತಿ ಪ್ರಮಾಣವನ್ನು ಶೇಕಡಾ 7.5ರಷ್ಟು ನಿಗದಿಪಡಿಸಬೇಕು ಎಂದು ವಾಲ್ಮೀಕಿ ಸಮುದಾಯ ಬೇಡಿಕೆ ಇಟ್ಟು, ಸತ್ಯಾಗ್ರಹ ನಡೆಸುತ್ತಿದೆ.

ಮೀಸಲಾತಿಯನ್ನು ಶೇಕಡಾ 50ಕ್ಕಿಂತ ಹೆಚ್ಚಿಗೆ ನಿಗದಪಡಿಸಬಾರದು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಆದರೆ ನಾಗಮೋಹನ್ ದಾಸ್ ಸಮಿತಿ ಶಿಫಾರಸು ಜಾರಿ ಮಾಡಿದರೆ ಮೀಸಲಾತಿ ಪ್ರಮಾಣವು ಒಟ್ಟಾರೆ ಶೇಕಡಾ 56ಕ್ಕೆ ಹೆಚ್ಚಳವಾಗುತ್ತದೆ. ಈ ಸಮಸ್ಯೆ ನಿರ್ವಹಿಸುವುದು ಹೇಗೆ ಎನ್ನುವ ಬಗ್ಗೆ ಮುಖ್ಯಮಂತ್ರಿ ಎಲ್ಲರ ಅಭಿಪ್ರಾಯ ಪರಾಮರ್ಶೆ ಮಾಡಲಿದ್ದಾರೆ.

ವಿಧಾನಸಭೆ ಅಧಿವೇಶನದಲ್ಲಿ ಮೀಸಲಾತಿಗೆ ಸಂಬಂಧಿಸಿದಂತೆ ಚರ್ಚೆ ನಡೆದಾಗ ಮುಖ್ಯಮಂತ್ರಿ ಸರ್ವಪಕ್ಷ ಸಭೆ ನಡೆಸುವ ಭರವಸೆ ನೀಡಿದ್ದರು. ಅದರಂತೆ ಇಂದು ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ನಿವಾಸದಲ್ಲಿ ಸಭೆ ನಡೆಯುತ್ತಿದೆ. ಮುಖ್ಯಮಂತ್ರಿ ಕರೆದಿರುವ ಸಭೆಗೆ ತೆರಳುವ ಮೊದಲು ಸಿದ್ದರಾಮಯ್ಯ ನಿವಾಸದಲ್ಲಿ ಕಾಂಗ್ರೆಸ್ ಪಕ್ಷದಲ್ಲಿರುವ ಎಸ್​ಟಿ ನಾಯಕರೊಂದಿಗೆ ಸಿದ್ದರಾಮಯ್ಯ ಕೆಲ ಸಮಯ ಮಾತುಕತೆ ನಡೆಸಿದರು. ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ ಖಾದರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಉಪಸ್ಥಿತರಿದ್ದರು. ವಾಲ್ಮೀಕಿ ಜನಾಂಗದ ಬೇಡಿಕೆಯ ಕುರಿತು ವಿಷಯ ಪ್ರಸ್ತಾಪವಾಯಿತು ಎಂದು ಮೂಲಗಳು ತಿಳಿಸಿವೆ.

ನಗರದಲ್ಲಿ ಬಿಜೆಪಿ ಕೋರ್​ ಕಮಿಟಿ ಸಭೆ ನಡೆಯುತ್ತಿದ್ದು ಅಲ್ಲಿಯೂ ಮೀಸಲಾತಿ ವಿಚಾರ ಪ್ರಸ್ತಾಪವಾಗಿದೆ. ಎಸ್​ಟಿ ಮೀಸಲಾತಿ ಹೆಚ್ಚಿಸಬೇಕು ಎಂದು ಸಭೆಯು ಶಿಫಾರಸು ಮಾಡಿದೆ. ಈ ಬಗ್ಗೆ ಇದೇ ತಿಂಗಳ 9ರ ಒಳಗೆ ಅಧಿಕೃತ ಘೋಷಣೆ ಪ್ರಕಟಿಸುವಂತೆ ಮುಖ್ಯಮಂತ್ರಿಗೆ ಮನವಿ ಮಾಡಿದೆ.

ಮೀಸಲಾತಿಗೆ ಸರ್ಕಾರ ಬದ್ಧ: ಬೊಮ್ಮಾಯಿ
ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಜೆಪಿ ಕಾರ್ಯಕಾರಿಣಿ ನಡೆಯುತ್ತಿದೆ. ಅದರಲ್ಲಿ ಭಾಗವಹಿಸುವ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಸಿಎಂ ಬೊಮ್ಮಾಯಿ, ಎಸ್​ಸಿ, ಎಸ್​ಟಿ ಮೀಸಲಾತಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಸಾಮಾಜಿಕವಾಗಿಯೂ ಹಲವು ಸಮಸ್ಯೆ ಬಗೆಹರಿಸಲು ನಾವು ಬದ್ಧರಾಗಿದ್ದೇವೆ. ಜನಪರವಾಗಿರುವ ಆಡಳಿತವನ್ನ ನಮ್ಮ ಸರ್ಕಾರ ನೀಡುತ್ತಿದೆ. ಚುನಾವಣೆಯ ದೃಷ್ಟಿಯಿಂದ ಇದು ಮಹತ್ವದ ಅಂಶ ಎಂದು ಹೇಳಿದರು.

ಹಲವು ಸಂಘಟನೆಗಳಿಂದ ಪ್ರತಿಭಟನೆ: ಸರ್ವಪಕ್ಷ ಸಭೆ ಆರಂಭಕ್ಕೂ ಮುನ್ನ ಸಿಎಂ ಅಧಿಕೃತ ನಿವಾಸದ ಹೊರಗೆ ದಲಿತ ಸಂಘರ್ಷ ಸಮಿತಿ ಸೇರಿದಂತೆ ಹಲವು ಸಂಘಟನೆಗಳ ಸದಸ್ಯರು ಎಸ್ಸಿ/ಎಸ್ಟಿ ಮೀಸಲಾತಿ ವಿಚಾರದಲ್ಲಿ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯ ವರದಿಯನ್ನು ತಕ್ಷಣವೇ ಜಾರಿಗೆ ತರುವಂತೆ ಒತ್ತಾಯಿಸಿದರು.

ಸಭೆಯಲ್ಲಿ ಭಾಗವಹಿಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಸಿಗಬೇಕೆಂಬ ನಿಲುವಿಗೆ ನಾನು ಈಗಲೂ ಬದ್ಧ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com