ಟಿಪ್ಪು, ತಾಳಗುಪ್ಪ ಎಕ್ಸ್ ಪ್ರೆಸ್ ರೈಲಿನ ಹೆಸರು ಬದಲಾವಣೆ: ಇನ್ಮುಂದೆ ಒಡೆಯರ್ ಎಕ್ಸ್ ಪ್ರೆಸ್, ಕುವೆಂಪು ಎಕ್ಸ್ ಪ್ರೆಸ್

ಮೈಸೂರು – ಬೆಂಗಳೂರು ನಡುವೆ ನಿತ್ಯ ಸಂಚರಿಸುವ ಟಿಪ್ಪು ಎಕ್ಸ್ ಪ್ರೆಸ್ ಮತ್ತು ಮೈಸೂರು-ತಾಳಗುಪ್ಪ ಎಕ್ಸ್ ಪ್ರೆಸ್ ರೈಲಿನ ಹೆಸರು ಬದಲಾವಣೆ ಮಾಡಿ ರೈಲ್ವೆ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಮೈಸೂರು - ಬೆಂಗಳೂರು ನಡುವೆ ನಿತ್ಯ ಸಂಚರಿಸುವ ಟಿಪ್ಪು ಎಕ್ಸ್ ಪ್ರೆಸ್ ಮತ್ತು ಮೈಸೂರು-ತಾಳಗುಪ್ಪ ಎಕ್ಸ್ ಪ್ರೆಸ್ ರೈಲಿನ ಹೆಸರು ಬದಲಾವಣೆ ಮಾಡಿ ರೈಲ್ವೆ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದೆ.

ಟಿಪ್ಪು ಎಕ್ಸ್ ಪ್ರೆಸ್ ರೈಲಿನ ಹೆಸರನ್ನು ಒಡೆಯರ್ ಎಕ್ಸ್ ಪ್ರೆಸ್ ಎಂದು, ಮೈಸೂರು-ತಾಳಗುಪ್ಪ ಎಕ್ಸ್ ಪ್ರೆಸ್ ರೈಲಿನ ಹೆಸರನ್ನು ಕುವೆಂಪು ಎಕ್ಸ್ ಪ್ರೆಸ್ ಎಂದು ಮರು ನಾಮಕರಣ ಮಾಡಿರುವುದಾಗಿ ರೈಲ್ವೆ ಮಂಡಳಿ ಉಪ ನಿರ್ದೇಶಕ ರಾಜೇಶ್ ಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.

ಈ ಕುರಿತು ಅವರಿಂದು ಟ್ವೀಟ್ ಮಾಡಿರುವ ಸಂಸದ ಪ್ರತಾಪ್ ಸಿಂಹ ಅವರು, ಇನ್ನು ಮುಂದೆ ಟಿಪ್ಪು ಎಕ್ಸ್ಪ್ರೆಸ್ ಬದಲು "ಒಡೆಯರ್ ಎಕ್ಸ್ ಪ್ರೆಸ್" ನಿಮಗೆ ಸೇವೆ ನೀಡಲಿದೆ!! ಮೈಸೂರು-ತಾಳಗುಪ್ಪ ರೈಲು “ಕುವೆಂಪು ಎಕ್ಸ್ ಪ್ರೆಸ್” ಆಗಲಿದೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com