ಕಾಸರಗೋಡು: ಸರೋವರ ಕ್ಷೇತ್ರ ಅನಂತಪುರದ ‘ದೇವರ ಮೊಸಳೆ’ ಬಬಿಯಾ ನಿಧನ

ಸರೋವರ ಕ್ಷೇತ್ರ ಅನಂತಪುರ ಶ್ರೀ ಅನಂತ ಪದ್ಮನಾಭ ಸ್ವಾಮಿ ದೇವಸ್ಥಾನದ ಕ್ಷೇತ್ರ ಪಾಲಕನಂತಿದ್ದ ಮೊಸಳೆ ಬಬಿಯಾ ತನ್ನ ದೀರ್ಘ ಬದುಕಿಗೆ ವಿದಾಯ ಹೇಳಿದೆ.
ಬಬಿಯಾ ಮೊಸಳೆ ಇನ್ನಿಲ್ಲ
ಬಬಿಯಾ ಮೊಸಳೆ ಇನ್ನಿಲ್ಲ

ಕಾಸರಗೋಡು: ಸರೋವರ ಕ್ಷೇತ್ರ ಅನಂತಪುರ ಶ್ರೀ ಅನಂತ ಪದ್ಮನಾಭ ಸ್ವಾಮಿ ದೇವಸ್ಥಾನದ ಕ್ಷೇತ್ರ ಪಾಲಕನಂತಿದ್ದ ಮೊಸಳೆ ಬಬಿಯಾ ತನ್ನ ದೀರ್ಘ ಬದುಕಿಗೆ ವಿದಾಯ ಹೇಳಿದೆ.

ಈ ದೇವಸ್ಥಾನಕ್ಕೆ ಬರುವ ಭಕ್ತರಿಗೆ ಈ ಮೊಸಳೆ ಪ್ರಮುಖ ಆಕರ್ಷಣೆಯಾಗಿತ್ತು. ಅನಂತ ಪದ್ಮನಾಭ ಸ್ವಾಮಿ ದೇವಸ್ಥಾನದ ಕೆರೆಯಲ್ಲಿ ವಾಸವಾಗಿದ್ದ ಬಬಿಯಾ 'ದೇವರ ಮೊಸಳೆ ' ಎಂದೇ ಪ್ರಸಿದ್ಧಿ ಪಡೆದಿತ್ತು.

ಹಲವಾರು ವರ್ಷಗಳಿಂದ ದೇವಸ್ಥಾನದ ಕೆರೆಯಲ್ಲಿ ಇರುತ್ತಿದ್ದ ಬಬಿಯಾಗೆ ಪ್ರತಿನಿತ್ಯದ ಪೂಜೆಯ ಬಳಿಕ ನೈವೇದ್ಯ ಅರ್ಪಿಸುವುದು ಇಲ್ಲಿನ ಸಂಪ್ರದಾಯ. ಕೆಲ ವರ್ಷದ ಹಿಂದೆ ಕೆರೆಯಿಂದ ಹೊರಬಂದ ಬಬಿಯಾ ದೇವಾಲಯದ ಬಳಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿತ್ತು.

ದೇವರ ನೈವೇದ್ಯವೇ ಬಬಿಯಾಗೆ ನಿತ್ಯ ಆಹಾರ. ಈ ಕೆರೆಗೆ ಭಕ್ತರೂ ಇಳಿಯುತ್ತಿದ್ದರು ಆದರೆ ಇದುವರೆಗೂ ಯಾರಿಗೂ ನೋವನ್ನುಂಟು ಮಾಡಿದ ಘಟನೆಗಳೇ ಇಲ್ಲ ಎಂದು ಇಲ್ಲಿನ ಸ್ಥಳೀಯರು ಹೇಳಿದ್ದಾರೆ.

'ಈ ಮೊಸಳೆ ಇಲ್ಲಿಗೆ ಹೇಗೆ ಬಂತು ಎಂಬುದು ಯಾರಿಗೂ ಗೊತ್ತಿಲ್ಲ. ಈ ಮೊದಲು ಇದ್ದ 'ಬಬಿಯಾ' ಎಂಬ ಮೊಸಳೆಯನ್ನು ಬ್ರಿಟಿಷ್‌ ಅಧಿಕಾರಿಗಳು ಹೊಡೆದು ಕೊಂಡಿದ್ದರು. ಇದಾದ ಕೆಲ ದಿನಗಳ ನಂತರ ಮತ್ತೊಂದು ಮೊಸಳೆ ಈ ಸರೋವರದಲ್ಲಿ ಕಾಣಿಸಿಕೊಂಡಿತ್ತು’ ಎಂದು ಈ ದೇವಸ್ಥಾನಕ್ಕೆ ಬರುವ ಹಿರಿಯರು ಹೇಳುವ ಮಾತು. ವಯೋ ಸಹಜವಾಗಿ ಮೊಸಳೆ ಸಾವನ್ನಪ್ಪಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com