ಮಂಡ್ಯ: ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ 13 ರಿಂದ 16ರವರೆಗೆ ಮಹಾ ಕುಂಭಮೇಳ, ಸಕಲ ಸಿದ್ಧತೆ

ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಅಂಬಿಗರಹಳ್ಳಿ ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ 13 ರಿಂದ 16 ರವರೆಗೆ ಮಹಾ ಕುಂಭಮೇಳವನ್ನು ಆಯೋಜಿಸಲಾಗಿದೆ ಎಂದು ಸಚಿವರಾದ ನಾರಾಯಣ ಗೌಡ ಮತ್ತು ಕೆ. ಗೋಪಾಲಯ್ಯ ಹೇಳಿದರು.
ಸಿಎಂ ಬೊಮ್ಮಾಯಿ ಜೊತೆಗೆ ಸಚಿವರಾದ ಕೆ. ಸಿ.ನಾರಾಯಣಗೌಡ, ಗೋಪಾಲಯ್ಯ ಮತ್ತಿತರರು
ಸಿಎಂ ಬೊಮ್ಮಾಯಿ ಜೊತೆಗೆ ಸಚಿವರಾದ ಕೆ. ಸಿ.ನಾರಾಯಣಗೌಡ, ಗೋಪಾಲಯ್ಯ ಮತ್ತಿತರರು
Updated on

ಬೆಂಗಳೂರು: ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಅಂಬಿಗರಹಳ್ಳಿ ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ 13 ರಿಂದ 16 ರವರೆಗೆ ಮಹಾ ಕುಂಭಮೇಳವನ್ನು ಆಯೋಜಿಸಲಾಗಿದೆ ಎಂದು ಸಚಿವರಾದ ನಾರಾಯಣ ಗೌಡ ಮತ್ತು ಕೆ. ಗೋಪಾಲಯ್ಯ ಹೇಳಿದರು.

ವಿಧಾನಸೌಧದಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಲೆ ಮಹದೇಶ್ವರ ಬೆಟ್ಟದಿಂದ ಹೊರಟಿರುವ ಮೂರು  ಜ್ಯೋತಿಗಳು ನಾಡಿದ್ದು (ಅ.13) ತ್ರೀವೇಣಿ ಸಂಗಮದಲ್ಲಿ ಸೇರಲಿವೆ. ಅಂದು ಮಧ್ಯಾಹ್ನ 3 ಗಂಟೆಗೆ ಕೆ.ಆರ್. ಪೇಟೆಯಲ್ಲಿ ಜಿಲ್ಲಾ ಉತ್ಸವದ ಮೆರವಣಿಗೆಗೆ ಚಾಲನೆ ದೊರೆಯಲಿದೆ ಎಂದು ಹೇಳಿದರು.

ಕುಂಭ ಮೇಳದಲ್ಲಿ 300ಕ್ಕೂ ಹೆಚ್ಚು ಧಾರ್ಮಿಕ ಗುರುಗಳು, 3 ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳು ಭಾಗಿಯಾಗಲಿದ್ದಾರೆ. ನಿರ್ಮಲಾನಂಧನಾಥ ಸ್ವಾಮೀಜಿ, ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಶಿವಾನಂದಪುರಿ ಸ್ವಾಮೀಜಿ ಸೇರಿದಂತೆ 30ಕ್ಕೂ ಹೆಚ್ಚು ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ. ಮಹಾಕುಂಭಮೇಳಕ್ಕೆ ರಾಜ್ಯ ಸರ್ಕಾರದಿಂದ 2 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಪ್ರತಿ ದಿನ 2 ಲಕ್ಷದಂತೆ ಒಟ್ಟು 6 ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದೆ. ಸ್ವಾಮೀಜಿಗಳು, ಸಾಧು ಸಂತರು, ಅತಿ ಗಣ್ಯ ವ್ಯಕ್ತಿಗಳು ಹಾಗೂ ಭಕ್ತರಿಗೆ ಪ್ರತ್ಯೇಕ ಸ್ನಾನ ಘಟ್ಟದ ವ್ಯವಸ್ಥೆ ಮಾಡಲಾಗಿದೆ ಎಂದರು.

ಅ. 14 ಬೆಳಗ್ಗೆ 11 ಗಂಟೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರಿಂದ ಕುಂಭ ಮೇಳ ಕಾರ್ಯಕ್ರಮ ಉದ್ಘಾಟನೆಯಾಗಲಿದ್ದು, ಅ.16 ಬೆಳಗ್ಗೆ 11 ಗಂಟೆಗೆ ಮಹಾ ಕುಂಭಮೇಳ ಸಮಾರೋಪ ಸಮಾರಂಭವನ್ನು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಉದ್ಘಾಟಿಸಲಿದ್ದು, ಇದರಲ್ಲಿ ಸಿಎಂ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪಾಲ್ಗೊಳ್ಳಲಿದ್ದಾರೆ ಎಂದು ಅವರು ಹೇಳಿದರು. 

ಮಹಾ ಕುಂಭ ಮೇಳಕ್ಕಾಗಿ ನಾಲ್ಕು ದಿನಗಳ ಕಾಲ ನಿರಂತರ ಊಟದ ವ್ಯವಸ್ಥೆ ಸೇರಿದಂತೆ  200ಕ್ಕೂ ಹೆಚ್ಚು ಬಯೋ ಟಾಯ್ಲೆಟ್, ಯಾತ್ರಾರ್ಥಿಗಳಿಗೆ ಉಚಿತ ವೈ ಫೈ ವ್ಯವಸ್ಥೆ ಮಾಡಲಾಗಿದ್ದು, 200 ಸಾಧುಗಳ ವಾಸ್ತವ್ಯಕ್ಕೆ ಟೆಂಟ್ ನಿರ್ಮಾಣ ಮಾಡಲಾಗಿದೆ. ಸಂಗಮದಲ್ಲಿ  ಭದ್ರತೆಗಾಗಿ 2000 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ, ನುರಿತ ಈಜುಗಾರರು, ಮುಳುಗು ತಜ್ಞರ ನಿಯೋಜಿಸಲಾಗುವುದು ಎಂದು ಅವರು ತಿಳಿಸಿದರು, 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com