ಮೈಸೂರು ಅರಮನೆ( ಸಂಗ್ರಹ ಚಿತ್ರ)
ಮೈಸೂರು ಅರಮನೆ( ಸಂಗ್ರಹ ಚಿತ್ರ)

ವಿಶ್ವ ಪ್ರಸಿದ್ಧ ದಸರಾ ವೇಳೆ ಮೈಸೂರು ಅರಮನೆಗೆ 2 ಲಕ್ಷ ಪ್ರವಾಸಿಗರ ಭೇಟಿ!

ಇತ್ತೀಚೆಗೆ ನಡೆದ 10 ದಿನಗಳ ದಸರಾ ಮಹೋತ್ಸವದಲ್ಲಿ ಎರಡು ಲಕ್ಷಕ್ಕೂ ಅಧಿಕ ಮಂದಿ ಮೈಸೂರಿನ ಪ್ರಸಿದ್ಧ ಅಂಬಾ ವಿಲಾಸ ಅರಮನೆಗೆ ಭೇಟಿ ನೀಡಿದ್ದರು.
Published on

ಮೈಸೂರು: ಇತ್ತೀಚೆಗೆ ನಡೆದ 10 ದಿನಗಳ ದಸರಾ ಮಹೋತ್ಸವದಲ್ಲಿ ಎರಡು ಲಕ್ಷಕ್ಕೂ ಅಧಿಕ ಮಂದಿ ಮೈಸೂರಿನ ಪ್ರಸಿದ್ಧ ಅಂಬಾ ವಿಲಾಸ ಅರಮನೆಗೆ ಭೇಟಿ ನೀಡಿದ್ದರು.

ನಗರದ ಶ್ರೀ ಚಾಮರಾಜೇಂದ್ರ ಮೃಗಾಲಯಕ್ಕೂ ಇದೇ ಸಂಖ್ಯೆಯ ಜನರು ಭೇಟಿ ನೀಡಿದ್ದರು. ಅರಮನೆ ಮಂಡಳಿಯ ಮಾಹಿತಿಯ ಪ್ರಕಾರ, ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 8 ರವರೆಗೆ 300 ವಿದೇಶಿಗರು ಮತ್ತು 6,000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೇರಿದಂತೆ 2.07 ಲಕ್ಷ ಜನರು ಅರಮನೆಗೆ ಭೇಟಿ ನೀಡಿದ್ದಾರೆ.

ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಭಾರೀ ನಷ್ಟಕ್ಕೊಳಗಾಗಿದ್ದ ಪ್ರವಾಸೋದ್ಯಮ ಕ್ಷೇತ್ರ ಮತ್ತೆ  ಚೇತರಿಸಿಕೊಳ್ಳುತ್ತಿದೆ. ಕಳೆದ 2 -ಮೂರು ವರ್ಷಗಳಲ್ಲಿ ಪ್ರವಾಸಿಗರ ಸಂಖ್ಯೆ 2 ಲಕ್ಷ ಗಡಿ ದಾಟಿರಲಿಲ್ಲ.

ದಸರಾ ಮಹೋತ್ಸವದ ವೇಳೆ ಟಿಕೆಟ್ ನಿಂದಾಗಿ ಒಟ್ಟು 2.6 ಕೋಟಿ ರೂ. ಸಂಗ್ಹವಾಗಿದೆ. ಮೃಗಾಲಯದಲ್ಲೂ ಇದೇ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗಿದೆ. 2 ಲಕ್ಷಕ್ಕೂ ಹೆಚ್ಚು ಜನರು ಮೃಗಾಲಯಕ್ಕೆ ಭೇಟಿ ನೀಡಿದ್ದು, ಸಮೀಪದ ಕಾರಂಜಿ ಕೆರೆಯಿಂದ 2.6 ಕೋಟಿ ರೂಪಾಯಿ ಆದಾಯ ಗಳಿಸಿದೆ ಎಂದು ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ್ ಹೇಳಿದ್ದಾರೆ.

ವಾರಾಂತ್ಯದಲ್ಲಿಯೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಸಾಂಕ್ರಾಮಿಕ ರೋಗದಿಂದಾಗಿ ತೀವ್ರ ಬಿಕ್ಕಟ್ಟಿಗೆ ಸಿಲುಕಿದ್ದ ಪ್ರವಾಸೋದ್ಯಮವು ಮತ್ತೆ ಟ್ರ್ಯಾಕ್‌ಗೆ ಮರಳುವ ಸಂಕೇತವಾಗಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com