ಹಾವೇರಿಯಲ್ಲಿ ಜನವರಿ 6, 7 ಮತ್ತು 8 ರಂದು 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ
ಬೆಂಗಳೂರು: ಸಾಕಷ್ಟು ಗೊಂದಲಗಳ ನಡುವೆ ಈ ಬಾರಿಯ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಾವೇರಿಯಲ್ಲಿ ಜನವರಿ 6, 7 ಮತ್ತು 8 ರಂದು ಮೂರು ದಿನಗಳ ಕಾಲ ನಡೆಸಲು ತೀರ್ಮಾನಿಸಲಾಗಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಅವರು ಮುಖ್ಯಮಂತ್ರಿ ಬಸವರಾಜ ಎಸ್ ಬೊಮ್ಮಾಯಿ ಅವರ ಜೊತೆ ಚರ್ಚೆ ನಡೆಸಿ ದಿನಾಂಕವನ್ನು ಅಂತಿಮಗೊಳಿಸಿದ್ದಾರೆ.
ಸಮ್ಮೇಳನಕ್ಕೆ ಎಂಟರಿಂದ ಹತ್ತು ಲಕ್ಷ ಜನ ಸೇರುವ ನಿರೀಕ್ಷೆಯಿದ್ದು, 30 ಸಾವಿರ ವಸತಿ ವ್ಯವಸ್ಥೆ ಮಾಡಲಾಗುತ್ತದೆ. ಪ್ರತಿ ದಿನ 2.50 ಲಕ್ಷ ಜನರಿಗೆ ಊಟೋಪಚಾರ ವ್ಯವಸ್ಥೆ ಮಾಡಲಾಗುತ್ತದೆ. ಈ ಬಗ್ಗೆ ಸಿದ್ಧತೆಗಾಗಿ ಅಕ್ಟೋಬರ್ 20ರಂದು ಹಾವೇರಿಯಲ್ಲಿ ಸಿದ್ಧತಾ ಸಭೆ ನಡೆಸಲು ತೀರ್ಮಾನಿಸಲಾಗಿದೆ.
ಸಚಿವ ಸುನೀಲ್ ಕುಮಾರ್ ಅವರು ಇಂದು ವಿಧಾನಸೌಧದಲ್ಲಿ ಪೂರ್ವಭಾವಿ ಸಭೆ ನಡೆಸಿದರು. ಸಭೆಯಲ್ಲಿ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್, ಕಸಾಪ ಅಧ್ಯಕ್ಷ ಮಹೇಶ್ ಜೋಷಿ, ಶಾಸಕರಾದ ನೆಹರು ಓಲೇಕಾರ್, ಅರುಣ್ ಕುಮಾರ್, ಹಾವೇರಿ ಡಿಸಿ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ