ರಾಜ್ಯದಲ್ಲಿ ಹಿಜಾಬ್ ನಿಷೇಧ: ಬೆಳಗ್ಗೆ 10.30ಕ್ಕೆ ಸುಪ್ರೀಂ ಕೋರ್ಟ್ ನಿಂದ ತೀರ್ಪು ಪ್ರಕಟ

ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿರುವ ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧದ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ಸುಪ್ರೀಂ ಕೋರ್ಟ್ ಗುರುವಾರ ಬೆಳಗ್ಗೆ ತೀರ್ಪು ಪ್ರಕಟಿಸಲಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ನವದೆಹಲಿ: ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿರುವ ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧದ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ಸುಪ್ರೀಂ ಕೋರ್ಟ್ ಗುರುವಾರ ಬೆಳಗ್ಗೆ ತೀರ್ಪು ಪ್ರಕಟಿಸಲಿದೆ.

ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರ ಸುಪ್ರೀಂ ಪೀಠ 10 ದಿನಗಳ ಕಾಲ ವಾದವನ್ನು ಆಲಿಸಿದ ನಂತರ ಸೆಪ್ಟೆಂಬರ್ 22 ರಂದು ಪ್ರಕರಣದ ತೀರ್ಪನ್ನು ಕಾಯ್ದಿರಿಸಿತ್ತು.

ಸುಪ್ರೀಂ ಕೋರ್ಟ್ ವೆಬ್‌ಸೈಟ್ ಪ್ರಕಾರ, ಪೀಠವು ಹಿಜಾಬ್ ನಿಷೇಧ ಪ್ರಕರಣದ ತೀರ್ಪುನ್ನು ಕ್ಟೋಬರ್ 13 ರಂದು ಬೆಳಗ್ಗೆ 10.30ಕ್ಕೆ ಪ್ರಕಟಿಸಲಿದೆ

ಮಾರ್ಚ್ 15 ರಂದು, ಉಡುಪಿಯ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯರ ತಂಡ, ತರಗತಿಯೊಳಗೆ ಹಿಜಾಬ್ ಧರಿಸಲು ಅನುಮತಿ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಅಲ್ಲದೆ ಇದು ಇಸ್ಲಾಮಿಕ್ ನಂಬಿಕೆಯ ಅಗತ್ಯ ಧಾರ್ಮಿಕ ಆಚರಣೆಯ ಭಾಗವಲ್ಲ ಎಂದು ಹೈಕೋರ್ಟ್ ಹೇಳಿತ್ತು.

ರಾಜ್ಯ ಸರ್ಕಾರವು ಫೆಬ್ರವರಿ 5, 2022 ರಂದು ಹೊರಡಿಸಿದ ತನ್ನ ಆದೇಶದಲ್ಲಿ ಶಾಲೆ ಮತ್ತು ಕಾಲೇಜುಗಳಲ್ಲಿ ಸಮಾನತೆ, ಸಮಗ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತರುವ ಬಟ್ಟೆ ಧರಿಸುವುದನ್ನು ನಿಷೇಧಿಸಿದೆ.

ರಾಜ್ಯ ಸರ್ಕಾರದ ನಿಷೇಧ ಎತ್ತಿ ಹಿಡಿದ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದವು.

ವಿಚಾರಣೆಯ ಸಂದರ್ಭದಲ್ಲಿ, ಅರ್ಜಿದಾರರ ಪರ ವಕೀಲರು ಹಿಜಾಬ್ ಅತ್ಯಗತ್ಯ ಧಾರ್ಮಿಕ ಅಭ್ಯಾಸ ಅಲ್ಲ ಎಂದು ಹೈಕೋರ್ಟ್ ತಪ್ಪಾಗಿ ತೀರ್ಪು ನೀಡಿದೆ ಎಂದು ವಾದಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com