ರಾಜ್ಯದ ವಿವಿಧೆಡೆ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ವಿವಿಧೆಡೆ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ರಾಜ್ಯದ ವಿವಿಧೆಡೆ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಭಾರೀ ಮಳೆ ಮುನ್ನೆಚ್ಚರಿಕೆ:  ಮುಂದಿನ 24 ಘಂಟೆಗಳಲ್ಲಿ ಕರಾವಳಿಯ ಎಲ್ಲಾ ಜಿಲ್ಲೆಗಳ ಮತ್ತು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ , ಕೊಡಗು, ಮಂಡ್ಯ, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಮುಂದಿನ 48 ಘಂಟೆಗಳು: ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಮತ್ತು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ಜಿಲ್ಲೆಗಳ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಕೆಲವು ಬಾರಿ ಮಳೆ/ಗುಡುಗಿನಿಂದ ಕೂಡಿದ ಮಳೆಯಾಗಲಿದೆ. ಇನ್ನು ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 19 ಡಿಗ್ರಿ ಸೆಲ್ಸಿಯಸ್ ಆಗಿರುವ ಸಾಧ್ಯತೆಯಿದೆ. 

ಮೀನುಗಾರರಿಗೆ ಎಚ್ಚರಿಕೆ: ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಪ್ರತಿ ಘಂಟೆಗೆ 45–55 ಕಿ.ಮೀ. ಇರುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com