ಸಿಎಂ ಬೊಮ್ಮಾಯಿ
ರಾಜ್ಯ
ಕಂಠೀರವ ಸ್ಟೇಡಿಯಂ ಟ್ರ್ಯಾಕ್ ಹಾಳಾಗದಂತೆ ಕ್ರಮವಹಿಸಲು ತಾಕೀತು: ಸಿಎಂ ಬೊಮ್ಮಾಯಿ
ಕಂಠೀರವ ಕ್ರೀಡಾಂಗಣದ ಟ್ರ್ಯಾಕ್ ಹಾಳಾಗದಂತೆ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಲಾಸಗುವುದು ಎಂದು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ತಿಳಿಸಿದರು.
ಬೆಂಗಳೂರು: ಕಂಠೀರವ ಕ್ರೀಡಾಂಗಣದ ಟ್ರ್ಯಾಕ್ ಹಾಳಾಗದಂತೆ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಲಾಸಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು 61ನೇ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ 2022 ಉದ್ಘಾಟಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಕಂಠೀರವ ಸ್ಟೇಡಿಯಂ ನ್ನು ಫುಟ್ಬಾಲ್ ಕ್ರೀಡೆಗೆ ನೀಡುತ್ತಿದ್ದು, ರಾಜ್ಯದ ಕ್ರೀಡಾಪಟುಗಳಿಗೆ ಇದರಿಂದ ತೊಂದರೆಯಾಗುತ್ತಿರುವುದಕ್ಕೆ ಪ್ರತಿಕ್ರಿಯೆ ನೀಡಿದರು.
ಕರ್ನಾಟಕ ಅಥ್ಲೆಟಿಕ್ಸ್ ಅಸೋಸಿಯೇಷನ್ ಅವರು ಮಾಡುತ್ತಿದ್ದು, ಈ ವಿಚಾರ ಅವರ ಅಧಿಕಾರದ ಮಿತಿಗೆ ಒಳಪಟ್ಟಿದ್ದು, ನಾವು ನಿರ್ಧರಿಸಲು ಆಗುವುದಿಲ್ಲ.ಆದರೆ ಕ್ರೀಡಾಂಗಣದಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ಟ್ರ್ಯಾಕ್ ನ್ನು ಹಾಳಾಗದಂತೆ ಕಾಪಾಡುವುದು ಅಸೋಸಿಯೇಷನ್ ನವರ ಜವಾಬ್ದಾರಿ. ಇದಕ್ಕೆ ಸಂಬಂಧಪಟ್ಟವರನ್ನು ಕರೆಸಿ ಈ ಬಗ್ಗೆ ತಾಕೀತು ಮಾಡಲಾಗುವುದು ಎಂದು ತಿಳಿಸಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ