ಮದುವೆ ನೆಪದಲ್ಲಿ ಯುವತಿ ಮತಾಂತರ: ಮತಾಂತರ ವಿರೋಧಿ ಕಾನೂನಿನಡಿ ಮುಸ್ಲಿಂ ಯುವಕ ಬಂಧನ

ಮದುವೆಯಾಗುವ ನೆಪದಲ್ಲಿ ಯುವತಿಯನ್ನು ಮತಾಂತರ ಮಾಡಿದ್ದಕ್ಕಾಗಿ ಮುಸ್ಲಿಂ ಯುವಕನನ್ನು ಇತ್ತೀಚೆಗಷ್ಟೇ ಜಾರಿಯಾಗಿರುವ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣೆ ಕಾಯ್ದೆಯಡಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು:ಮದುವೆಯಾಗುವ ನೆಪದಲ್ಲಿ ಯುವತಿಯನ್ನು ಮತಾಂತರ ಮಾಡಿದ್ದಕ್ಕಾಗಿ ಮುಸ್ಲಿಂ ಯುವಕನನ್ನು ಇತ್ತೀಚೆಗಷ್ಟೇ ಜಾರಿಯಾಗಿರುವ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣೆ ಕಾಯ್ದೆಯಡಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮಹಿಳೆಯ ತಾಯಿ ನೀಡಿದ ದೂರಿನ ಮೇರೆಗೆ ಸೈಯದ್ ಮುಯಿನ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಬೆಂಗಳೂರು ಉತ್ತರ ವಿಭಾಗದ ಉಪ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ ಪಾಟೀಲ್ ತಿಳಿಸಿದ್ದಾರೆ.

18 ವರ್ಷದ ಯುವತಿಯ ತಾಯಿ ನೀಡಿದ ದೂರಿನ ಮೇರೆಗೆ ಅಕ್ಟೋಬರ್ 6 ರಂದು ನಾಪತ್ತೆ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 8 ರಂದು ಪೊಲೀಸ್ ಠಾಣೆಯಲ್ಲಿ ಯುವಕ ಹಾಗೂ ಯುವತಿಯನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ತನ್ನ ಮಗಳನ್ನು ಮದುವೆಯಾಗುವುದಾಗಿ ಹೇಳಿ ಯುವಕ ಮತಾಂತರ ಮಾಡಿದ್ದಾನೆ ಎಂದು  ಗುರುವಾರ ರಾತ್ರಿ ಯುವತಿ ತಾಯಿ ಮತ್ತೆ ದೂರು ನೀಡಿದ್ದಾರೆ. ಅದರಂತೆ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ ಕಲಂ 5ರಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪಾಟೀಲ್ ಸುದ್ದಿಗಾರರಿಗೆ ತಿಳಿಸಿದರು.

ದೂರುದಾರರ ಪ್ರಕಾರ, ಆಂಧ್ರಪ್ರದೇಶದ ಪೆನುಕೊಂಡದಲ್ಲಿ ಧಾರ್ಮಿಕ ಮತಾಂತರ ನಡೆದಿದೆ ಎಂದು ಅವರು ತಿಳಿಸಿದ್ದಾರೆ. ಈ ಕಾಯ್ದೆಯಡಿ ಯಾವುದೇ ನೊಂದ ವ್ಯಕ್ತಿ, ಅವನ ಹೆತ್ತವರು, ಸಹೋದರ, ಸಹೋದರಿ ಅಥವಾ ರಕ್ತ, ಮದುವೆ ಅಥವಾ ದತ್ತು ಪಡೆಯುವ ಮೂಲಕ ಸಂಬಂಧ ಹೊಂದಿರುವ ಯಾವುದೇ ವ್ಯಕ್ತಿ ಅಂತಹ ಮತಾಂತರದ ಮೊದಲ ಮಾಹಿತಿ ವರದಿಯನ್ನು ಸಲ್ಲಿಸಬಹುದು, ಅದು ಸೆಕ್ಷನ್ 3 ರ ನಿಬಂಧನೆಗಳನ್ನು ಉಲ್ಲಂಘಿಸುತ್ತದೆ. ಈ ನಿಬಂಧನೆಗಳನ್ನು ಉಲ್ಲಂಘಿಸುವವರಿಗೆ ಕಾನೂನಿನ ಪ್ರಕಾರ ಜೈಲು ಶಿಕ್ಷೆ ವಿಧಿಸಲಾಗುತ್ತದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com