ಸಚಿವ ಎನ್.ಅಂಗಾರ
ರಾಜ್ಯ
ಮೀನುಗಾರರ ಹಿತರಕ್ಷಣೆಗೆ ರಾಜ್ಯ ಸರ್ಕಾರ ಸಂಪೂರ್ಣ ಬದ್ಧ: ಸಚಿವ ಎಸ್. ಅಂಗಾರ
ಮೀನುಗಾರರ ಹಿತರಕ್ಷಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಬಂದರು, ಮೀನುಗಾರಿಕೆ, ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ತಿಳಿಸಿದ್ದಾರೆ.
ಬೆಂಗಳೂರು: ಮೀನುಗಾರರ ಹಿತರಕ್ಷಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಬಂದರು, ಮೀನುಗಾರಿಕೆ, ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ತಿಳಿಸಿದ್ದಾರೆ.
ಮೀನುಗಾರರಿಗೆ ವಸತಿ ಸೌಲಭ್ಯ, ಸಹಾಯ ಧನ ಹಾಗೂ ಮೀನುಗಾರಿಕೆ ರಫ್ತು ಹೆಚ್ಚಳಕ್ಕೆ ಕ್ರಮ ವಹಿಸುವ ಜತೆ ವಿದ್ಯಾನಿಧಿ ಯೋಜನೆಯಡಿ ಮೀನುಗಾರರ ಮಕ್ಕಳ ಶಿಕ್ಷಣವನ್ನು ಪ್ರೋತ್ಸಾಹಿಸಲು ಸೂಕ್ತ ಕ್ರಮ ವಹಿಸಲಾಗುತ್ತಿದೆ ಎಂದು ಅವರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ರೈತರ ಮಕ್ಕಳಿಗೆ ವಿದ್ಯಾನಿಧಿ ಯೋಜನೆಯನ್ನು ಮೀನುಗಾರರ ಮಕ್ಕಳಿಗೂ ಸಹ ವಿಸ್ತರಿಸಲಾಗಿದ್ದು, ಈ ವರ್ಷ 1 ಲಕ್ಷ ಮೀನುಗಾರರ ಮಕ್ಕಳಿಗೆ ರೈತ ವಿದ್ಯಾನಿಧಿ ವಿತರಿಸುವ ಗುರಿ ಹೊಂದಲಾಗಿದೆ. ಮೀನುಗಾರರಿಗೆ ಸೂಕ್ತ ವಸತಿ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ 5000ಮನೆಗಳನ್ನು ಮಂಜೂರು ಮಾಡಲಾಗಿದ್ದು, ಶೀಘ್ರದಲ್ಲೇ ವಿತರಿಸಲಾಗುವುದು ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ