ಕಾಂಗ್ರೆಸ್‌ ಅಧ್ಯಕ್ಷೀಯ ಚುನಾವಣೆ: ಬಳ್ಳಾರಿಯಲ್ಲಿ ರಾಹುಲ್‌ ಗಾಂಧಿ ಮತ ಚಲಾವಣೆ

ದೇಶದ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆ ಸೋಮವಾರ ಆರಂಭವಾಗಿದ್ದು, ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಬಳ್ಳಾರಿಯಲ್ಲಿ ತಮ್ಮ ಮತ ಹಕ್ಕು ಚಲಾಯಿಸಿದರು.
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ಬೆಂಗಳೂರು: ದೇಶದ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆ ಸೋಮವಾರ ಆರಂಭವಾಗಿದ್ದು, ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಬಳ್ಳಾರಿಯಲ್ಲಿ ತಮ್ಮ ಮತ ಹಕ್ಕು ಚಲಾಯಿಸಿದರು. 

‘ಭಾರತ್ ಜೋಡೊ ಯಾತ್ರೆ' ಕೈಗೊಂಡಿರುವ ಎಐಸಿಸಿ ನಾಯಕ ರಾಹುಲ್ ಗಾಂಧಿ ಪ್ರಸ್ತುತ ಬಳ್ಳಾರಿಯಲ್ಲಿದ್ದು, ಚುನಾವಣೆ ಹಿನ್ನೆಲೆಯಲ್ಲಿ ಇಲ್ಲಿನ ಸಂಗನಕಲ್ಲು ವಿಶ್ರಾಂತಿ ತಾಣದಲ್ಲಿ ವ್ಯವಸ್ಥೆ ಮಾಡಿರುವ ವಿಶೇಷ ಮತಗಟ್ಟೆಯಲ್ಲಿ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು. 

ಮತದಾನ ಹಿನ್ನೆಲೆಯಲ್ಲಿ ಪಾದಯಾತ್ರೆ ಮೊಟಕುಗೊಳಿಸಲು ಸಾಧ್ಯವಿಲ್ಲದ ಕಾರಣ, ರಾಹುಲ್ ಗಾಂಧಿ ಹಾಗೂ ಅವರೊಂದಿಗೆ ಯಾತ್ರೆಯಲ್ಲಿ ಭಾಗಿಯಾಗಿರುವ 40 ಮಂದಿ ಸದಸ್ಯರಿಗೆ ಸಂಗನಕಲ್ಲು ವಿಶ್ರಾಂತಿ ತಾಣದಲ್ಲಿ ವಿಶೇಷ ಮತಗಟ್ಟೆ ವ್ಯವಸ್ಥೆ ಮಾಡಲಾಗಿತ್ತು. 

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ಒಟ್ಟಾರೆ 9 ಸಾವಿರಕ್ಕೂ ಅಧಿಕ ಮಂದಿ ಎಐಸಿಸಿ ಪ್ರತಿನಿಧಿಗಳು ಮತ ಚಲಾಯಿಸುವ ಹಕ್ಕು ಹೊಂದಿದ್ದು, ಕರ್ನಾಟಕದಲ್ಲಿ ಶಾಸಕರು, ವಿಧಾನ ಪರಿಷತ್ ಸದಸ್ಯರು, ಸಂಸದರು ಹಾಗೂ ರಾಜ್ಯಸಭಾ ಸದಸ್ಯರು ಸೇರಿದಂತೆ ಒಟ್ಟು 494 ಮಂದಿ ಪ್ರತಿನಿಧಿಗಳು ಹಕ್ಕು ಚಲಾಯಿಸಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com