ದೀಪಾವಳಿ ಪ್ರಯುಕ್ತ ಕೆಎಸ್ ಆರ್ ಟಿಸಿಯಿಂದ 1,500 ಹೆಚ್ಚುವರಿ ಬಸ್ ಸೌಲಭ್ಯ

ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ 1,500 ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಿದೆ. ಅಕ್ಟೋಬರ್  21ರಿಂದ 23ರವರೆಗೆ ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳು ಮತ್ತು ಹೊರ ರಾಜ್ಯಗಳಿಗೆ ವಿಶೇಷ ಬಸ್‌ಗಳು ಹೊರಡಲಿವೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ 1,500 ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಿದೆ. ಅಕ್ಟೋಬರ್  21ರಿಂದ 23ರವರೆಗೆ ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳು ಮತ್ತು ಹೊರ ರಾಜ್ಯಗಳಿಗೆ ವಿಶೇಷ ಬಸ್‌ಗಳು ಹೊರಡಲಿವೆ. 26ರಿಂದ 30ರ ವರೆಗೆ ಬೆಂಗಳೂರಿಗೆ ವಾಪಸ್ ಬರಲಿವೆ.

ಮೆಜೆಸ್ಟಿಕ್‌ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿಗೆ ಬಸ್‌ಗಳು ಸಂಚಾರ ಮಾಡಲಿವೆ.

ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿಗೆ ತೆರಳಲಿವೆ. ತಮಿಳುನಾಡು ಮತ್ತು ಆಂಧ್ರ ಪ್ರದೇಶಕ್ಕೆ ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ಬಸ್‌ಗಳು ಸಂಚರಿಸಲಿವೆ.

ಆಸನಗಳನ್ನು ಮುಂಗಡವಾಗಿ ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್‌ ಕಾಯ್ದಿರಿಸಿದಲ್ಲಿ ಶೇ 5ರಷ್ಟು ರಿಯಾಯಿತಿ ನೀಡಲಾಗುವುದು. ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟನ್ನು ಒಟ್ಟಿಗೆ ಕಾಯ್ದಿರಿಸಿದಾಗ ಹಿಂದಿರುಗುವ ಪ್ರಯಾಣ ದರದಲ್ಲಿ ಶೇ 10ರಷ್ಟು ರಿಯಾಯಿತಿ ಕೊಡಲಾಗುವುದು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com