ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಬೆದರಿಕೆ ಪ್ರಕರಣ: ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ಕಾರು ಅಡ್ಡಗಟ್ಟಿ ಬೆದರಿಕೆ ಹಾಕಿದ ಪ್ರಕರಣ ಭಾರೀ ಚರ್ಚೆಗೆ ಕಾರಣವಾಗಿದೆ. ಕರ್ನಾಟಕ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿ ತನಿಖೆಗೆ ವಹಿಸಿ ಆದೇಶ ಹೊರಡಿಸಿದೆ.
ಹರೀಶ್ ಪೂಂಜಾ
ಹರೀಶ್ ಪೂಂಜಾ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ಕಾರು ಅಡ್ಡಗಟ್ಟಿ ಬೆದರಿಕೆ ಹಾಕಿದ ಪ್ರಕರಣ ಭಾರೀ ಚರ್ಚೆಗೆ ಕಾರಣವಾಗಿದೆ. ಕರ್ನಾಟಕ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿ ತನಿಖೆಗೆ ವಹಿಸಿ ಆದೇಶ ಹೊರಡಿಸಿದೆ.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರ್ ಅಡ್ಡಗಟ್ಟಿ ಜೀವ ಬೆದರಿಕೆ ಹಾಕಿದ ಪ್ರಕರಣದ ತನಿಖೆ ಹೊಣೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ಜಿಲ್ಲೆಯ ಫರಂಗಿಪೇಟೆ ಬಳಿ ಕಾರು ಅಡ್ಡಗಟ್ಟಿ ಶಾಸಕರಿಗೆ ಬೆದರಿಕೆ ಹಾಕಿದ್ದ ಬಗ್ಗೆ ಶಾಸಕರ ಕಾರು ಚಾಲಕ ಪೊಲೀಸ್​ ಠಾಣೆಗೆ ದೂರು ನೀಡಿದ್ದರು.

ಈ ಸಂಬಂಧ ಆರೋಪಿ ರಿಯಾಜ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ನಂತರ ಇದು ಕೊಲೆ ಯತ್ನ ಪ್ರಕರಣವಲ್ಲ. ಕಾರು ಹಿಂದಿಕ್ಕುವಾಗ ಈ ಘಟನೆ ನಡೆದಿದೆ ಎಂದು ಎಸ್​ಪಿ ಸ್ಪಷ್ಟನೆ ನೀಡಿದ್ದರು. ಇದೀಗ ರಾಜ್ಯ ಸರ್ಕಾರವು ಪ್ರಕರಣದ ತನಿಖೆ ಹೊಣೆಯನ್ನು ಸಿಐಡಿಗೆ ವಹಿಸಿ ಆದೇಶ ಹೊರಡಿಸಿದೆ.

ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ತನಿಖಾಧಿಕಾರಿ ಕಚೇರಿಯಲ್ಲಿರುವ ದಾಖಲೆಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯೇ ಸಿಐಡಿ ಕಚೇರಿಗೆ ಹಸ್ತಾಂತರಿಸಬೇಕು ಎಂದು ಡಿಜಿಪಿ ಪರವಾಗಿ ಆದೇಶ ಹೊರಡಿಸಿರುವ ಆರ್.ಹಿತೇಂದ್ರ ಆದೇಶದಲ್ಲಿ ಹೇಳಿದ್ದಾರೆ.

ಬೆಂಗಳೂರಿನಿಂದ ಮಂಗಳೂರಿಗೆ ಕಳೆದ ಅ 13ರ ರಾತ್ರಿ ವಿಮಾನದಲ್ಲಿ ಬಂದಿದ್ದ ಶಾಸಕರು ರಾತ್ರಿ 11.15 ಸಮಯದಲ್ಲಿ ಮನೆಗೆ ತೆರಳುವ ವೇಳೆ ಆರೋಪಿಗಳು ಫರಂಗಿಪೇಟೆ ಬಳಿ ಕಾರು ಅಡ್ಡಗಟ್ಟಿದ್ದರು. ಮಾರಕಾಸ್ತ್ರ ಝಳಪಿಸಿ ಜೀವ ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com