ಡಾ. ಕೆ. ಸಿ.ನಾರಾಯಣಗೌಡ
ರಾಜ್ಯ
176 ಕ್ರೀಡಾ ಕೋಚ್ ಹುದ್ದೆ ಮಂಜೂರು; ಶೀಘ್ರ ನೇಮಕ ಆರಂಭ: ಡಾ. ಕೆ.ಸಿ. ನಾರಾಯಣಗೌಡ
ತಾಲೂಕುಮಟ್ಟದ 176 ಕೋಚ್ ಹುದ್ದೆಗಳನ್ನು ಮಂಜೂರು ಮಾಡಿ ಆದೇಶ ಹೊರಡಿಸಲಾಗಿದ್ದು, ಶೀಘ್ರವೇ ನೇಮಕ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಕ್ರೀಡಾ ಸಚಿವ ಡಾ. ಕೆ. ಸಿ. ನಾರಾಯಣಗೌಡ ತಿಳಿಸಿದ್ದಾರೆ.
ಬೆಂಗಳೂರು: ತಾಲೂಕುಮಟ್ಟದ 176 ಕೋಚ್ ಹುದ್ದೆಗಳನ್ನು ಮಂಜೂರು ಮಾಡಿ ಆದೇಶ ಹೊರಡಿಸಲಾಗಿದ್ದು, ಶೀಘ್ರವೇ ನೇಮಕ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಕ್ರೀಡಾ ಸಚಿವ ಡಾ. ಕೆ.ಸಿ. ನಾರಾಯಣಗೌಡ ತಿಳಿಸಿದ್ದಾರೆ.
ಡಾಪಟುಗಳಿಗೆ ಉತ್ತಮ ಗುಣಮಟ್ಟದ ತರಬೇತಿ ಸಿಗಬೇಕೆಂಬ ಉದ್ದೇಶದಿಂದ ಪ್ರತಿ ತಾಲೂಕಿಗೆ ಒಬ್ಬರಂತೆ 235 ಕೋಚ್ ಹುದ್ದೆಗಳ ನನ್ನ ನಿರ್ದೇಶನದಂತೆ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಹಲವು ಸುತ್ತಿನ ಸಭೆ- ಚರ್ಚೆ ಬಳಿಕ ಆರ್ಥಿಕ ಇಲಾಖೆ ಹಳೇ ತಾಲೂಕುಗಳನ್ನು ಪರಿಗಣಿಸಿ 176 ಕೋಚ್ ಕಂ ಸಂಯೋಜಕರ ಹುದ್ದೆಗಳನ್ನು ಮಂಜೂರು ಮಾಡಿದೆ ಎಂದು ಅವರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಸರ್ಕಾರ ಕ್ರೀಡೆ, ಕ್ರೀಡಾಪಟುಗಳಿಗೆ ವಿಶೇಷ ಪ್ರೋತ್ಸಾಹ ನೀಡುತ್ತಿದ್ದು, ಕ್ರೀಡಾ ಇಲಾಖೆಯ ಇತಿಹಾಸದಲ್ಲೇ ಮೊದಲ ಬಾರಿಗೆ ತಾಲೂಕು ಮಟ್ಟದ ಹುದ್ದೆಗಳನ್ನು ಸೃಜಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ