ಕಾಮೇಗೌಡರ ಪುತ್ರನಿಗೆ ಸರ್ಕಾರಿ ಉದ್ಯೋಗ ನೀಡುವ ಭರವಸೆ ಈಡೇರಿಸದ ಬಿಜೆಪಿ: ಸಿದ್ದರಾಮಯ್ಯ ಅಸಮಾಧಾನ    

ಮಳವಳ್ಳಿ ಜಲಕ್ರಾಂತಿಯ ಕಾಮೇಗೌಡ ಅವರ ಪುತ್ರನಿಗೆ, ಸರ್ಕಾರಿ ಉದ್ಯೋಗ ಕೊಡುವ ಭರವಸೆಯನ್ನೂ ಈಡೇರಿಸಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಕಾಮೇಗೌಡ
ಕಾಮೇಗೌಡ

ಬೆಂಗಳೂರು: ಮಳವಳ್ಳಿ ಜಲಕ್ರಾಂತಿಯ ಕಾಮೇಗೌಡ ಅವರ ಪುತ್ರನಿಗೆ, ಸರ್ಕಾರಿ ಉದ್ಯೋಗ ಕೊಡುವ ಭರವಸೆಯನ್ನೂ ಈಡೇರಿಸಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಕಾಮೇಗೌಡರ ಪುತ್ರನಿಗೆ ಸರ್ಕಾರಿ ಕೆಲಸ ಎಂದು ಬಿಜೆಪಿ ಸರ್ಕಾರ ಭರ್ಜರಿ ಪ್ರಚಾರ ಗಿಟ್ಟಿಸಿತ್ತು. ಪ್ರಚಾರದ ಬಳಿಕ ಏನಾದರೂ ಕೆಲಸ ಆಗಿದೆಯೇ ಎಂದು ಪರೀಕ್ಷಿಸಿದರೆ ಏನೇನೂ ಆಗಿಲ್ಲ. ಕಾಮೇಗೌಡರ ಇಬ್ಬರು ಪುತ್ರರಲ್ಲಿ ಒಬ್ಬನಿಗೆ ಕೆಲಸ ಕೊಡುವುದಿರಲಿ, ಇವರ ಕುಟುಂಬದ ವಾರ್ಷಿಕ ಆದಾಯ-ಮತ್ತಿತರೆ ವಿವರಗಳನ್ನು ಸಂಗ್ರಹಿಸುವುದಕ್ಕೂ ಇಬ್ಬರು ಮುಖ್ಯಮಂತ್ರಿಗಳ ಅವಧಿಯಲ್ಲೂ ಸಾಧ್ಯವಾಗಿಲ್ಲ ಎಂದು ಟೀಕಿಸಿದರು.

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಕಾಮೇಗೌಡರ ಕುಟುಂಬದ ಆದಾಯ ಮತ್ತು ಇತರೆ ವಿವರಗಳನ್ನು ಒದಗಿಸುವಂತೆ ಕೋರಿ ಮಂಡ್ಯ ಜಿಲ್ಲಾಧಿಕಾರಿಗಳಿಗೆ ಇದುವರೆಗೂ ಆರು ಪತ್ರಗಳನ್ನು ಬರೆದಿದೆ. 2020 ರಿಂದ 2021ರ ಡಿಸೆಂಬರ್‌ವರೆಗೂ ಒಟ್ಟು ಆರು ಪತ್ರಗಳನ್ನು ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಗೆ ಬರೆಯಲಾಗಿದೆ.

ಕೊನೆಯ ಪತ್ರದಲ್ಲಿ “ಅವಶ್ಯವಿರುವ ವರದಿಯನ್ನು ನೀಡಲು ಒಂದು ವರ್ಷಕ್ಕೂ ಹೆಚ್ಚಿನ ಅವಧಿಗೆ ಸ್ಪಂದಿಸದಿರುವುದು ವಿಷಾದಕರ’ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಅವರು ಪ್ರಸ್ತಾಪಿಸಿದ್ದಾರೆ. ಆದರೂ ಮಂಡ್ಯ ಜಿಲ್ಲಾಧಿಕಾರಿಗಳಿಂದ ಇದುವರೆಗೂ ಸರ್ಕಾರಕ್ಕೆ ವರದಿ ಬಂದಂತೆ ಕಾಣುತ್ತಿಲ್ಲ. ಕಾಮೇಗೌಡರ ಕುಟುಂಬಕ್ಕೆ ಸರ್ಕಾರಿ ಕೆಲಸ ಸಿಕ್ಕಿಲ್ಲ. ಇದು ಸರ್ಕಾರದ ಕಾರ್ಯಕ್ಷಮತೆಗೆ ಸ್ಪಷ್ಟ ಉದಾಹರಣೆಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೆಪಿಸಿಸಿ ಸಂವಹನ ವಿಭಾಗದ ಅಧ್ಯಕ್ಷ ಪ್ರಿಯಾಂಕ್ ಖರ್ಗೆ ಸುದ್ದಿಗೋಷ್ಟಿ ನಡೆಸಿ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದರು. ಬಿಜೆಪಿ ಅವರು ಪ್ರಣಾಳಿಕೆಯಲ್ಲಿ 600ಕ್ಕೂ ಹೆಚ್ಚು ಭರವಸೆ ನೀಡಿದ್ದರು. ಆದರೆ ಒಂದೇ ಒಂದು ಭರವಸೆಯನ್ನೂ ಈಡೇರಿಸುವ ಕೆಲಸ ಮಾಡಿಲ್ಲ. ನಾವು ಇಲ್ಲಿಯತನಕ ಸಾಕಷ್ಟು ಪ್ರಶ್ನೆಗಳನ್ನ ಕೇಳಿದ್ದೇವೆ. ಆದರೆ ಅವರು ಉತ್ತರ ನೀಡುವ ಪ್ರಯತ್ನ ಮಾಡಲಿಲ್ಲ. ಸಾರ್ವಜನಿಕರಿಗೆ ಅವರು ಉತ್ತರ ಕೊಡಬೇಕಿದೆ ಎಂದ ಪ್ರಿಯಾಂಕ್ ಖರ್ಗೆ, ಪರೇಶ್ ಮೆಸ್ತಾ ಸಾವಿನ ಬಗ್ಗೆ ಸಿಬಿಐ ವರದಿಯ ಕುರಿತು ಮಾತನಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com