ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಚನ್ನರಾಯಪಟ್ಟಣ: ಮಳೆ ನೀರಿನಲ್ಲಿ ಕೊಚ್ಚಿ ಹೋಗಿ 5ನೇ ತರಗತಿ ವಿದ್ಯಾರ್ಥಿನಿ ಸಾವು

ರಾಜ್ಯದಲ್ಲಿ ಮಳೆ ದುರಂತಗಳು ಮುಂದುವರೆದಿದ್ದು, ನಿನ್ನೆ ಸುರಿದ ಭಾರಿ ಮಳೆಯಿಂದಾಗಿ ಚನ್ನರಾಯಪಟ್ಟಣದಲ್ಲಿ 5ನೇ ತರಗತಿ ವಿದ್ಯಾರ್ಥಿನಿಯೊಬ್ಬರು ಕೊಚ್ಚಿ ಹೋಗಿದ್ದಾರೆ.
Published on

ಹಾಸನ: ರಾಜ್ಯದಲ್ಲಿ ಮಳೆ ದುರಂತಗಳು ಮುಂದುವರೆದಿದ್ದು, ನಿನ್ನೆ ಸುರಿದ ಭಾರಿ ಮಳೆಯಿಂದಾಗಿ ಚನ್ನರಾಯಪಟ್ಟಣದಲ್ಲಿ 5ನೇ ತರಗತಿ ವಿದ್ಯಾರ್ಥಿನಿಯೊಬ್ಬರು ಕೊಚ್ಚಿ ಹೋಗಿದ್ದಾರೆ.

5ನೇ ತರಗತಿ ಓದುತ್ತಿರುವ ರಾಜಬೋವಿ ಎಂಬುವರ ಪುತ್ರಿ ರಂಜಿತಾ (11) ಗುರುವಾರ ಬೆಳಗ್ಗೆ ಚನ್ನರಾಯಪಟ್ಟಣ ತಾಲೂಕಿನ ದಡ್ಡಿಹಳ್ಳಿ ಟ್ಯಾಂಕ್ ಬಳಿ ಶಾಲೆಗೆ ಹೋಗುತ್ತಿದ್ದ ವೇಳೆ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾಳೆ ಎಂದು ತಿಳಿದುಬಂದಿದೆ.

<strong>ರಂಜಿತಾ</strong>
ರಂಜಿತಾ

ಆಕೆ ತನ್ನ ಚಿಕ್ಕಪ್ಪನ ಬೈಕ್ ನಲ್ಲಿ ಶಾಲೆಗೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಭಾರೀ ಮಳೆಯಿಂದ ತುಂಬಿ ಹರಿಯುತ್ತಿದ್ದ ಸೇತುವೆಯನ್ನು ದಾಟುವಾಗ ಬೈಕ್ ಸವಾರನ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಮಳೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾಳೆ. ಘಟನೆಯಲ್ಲಿ ಆಕೆಯ ಚಿಕ್ಕಪ್ಪ ಪವಾಡ ಸದೃಶವಾಗಿ ಪಾರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ಗುರುವಾರ ಬೆಳಗ್ಗೆ ಪ್ರವಾಹದಿಂದಾಗಿ ದಡ್ಡಿಹಳ್ಳಿ ಟ್ಯಾಂಕ್‌ ಒಡೆದು ಪ್ರವಾಹ ಏರ್ಪಟ್ಟಿತ್ತು. ಹೀಗಾಗಿ ದುರಂತ ಸಂಭವಿಸಿದೆ ಎನ್ನಲಾಗಿದೆ. ವಿಷಯ ತಿಳಿದ ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಕಾರ್ಯಾಚರಣೆ ನಡೆಸಿದ್ದು, ಬಾಲಕಿಯ ದೇಹವನ್ನು ಹೊರತೆಗೆದು ಪೋಷಕರಿಗೆ ಒಪ್ಪಿಸಲಾಗಿದೆ. ಚನ್ನರಾಯಪಟ್ಟಣ ತಾಲೂಕು ಕಳೆದ ಎರಡು ದಶಕಗಳಲ್ಲೇ ಅತಿ ಹೆಚ್ಚು ಮಳೆಯಾಗಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com