ಕುರುಬರಿಗೆ ಕಾಂಗ್ರೆಸ್ ಯಾವುದೇ ಸ್ಥಾನಮಾನ ನೀಡಿಲ್ಲ: ಸಮುದಾಯದ ಮುಖಂಡರ ಅಸಮಾಧಾನ
ತುಮಕೂರು: ಸತತ ಮೂರು ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕುರುಬರಿಗೆ ಯಾವುದೇ ಸ್ಥಾನ ನೀಡಿಲ್ಲ, ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ಸಮುದಾಯದ ಸದಸ್ಯರನ್ನು ಪರಿಗಣಿಸಲಾಗಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಕುರುಬ ಸಮುದಾಯದ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮುದಾಯದ ಮುಖಂಡರು, ಸಿದ್ದರಾಮಯ್ಯ ಅವರು ಪಕ್ಷಕ್ಕೆ ಸೇರ್ಪಡೆಗೊಂಡ ಬಳಿಕ ಕುರುಬ ಸಮುದಾಯದವರನ್ನು ಕಡೆಗಣಿಸಲಾಗಿಯೇ ಎಂಬ ಪ್ರಶ್ನೆಗೆ ಹೌದು ಎಂದು ಉತ್ತರಿಸಿದ್ದಾರೆ.
ಸತತ ಮೂರು ವಿಧಾನಸಭಾ ಚುನಾವಣೆಯಲ್ಲು ಕುರುಬರಿಗೆ ಕಾಂಗ್ರೆಸ್ ಸ್ಥಾನ ನೀಡಿಲ್ಲ. ಮಾಜಿ ಶಾಸಕ ಲಾಕಪ್ಪ, ಕುರುಬ ಸಂಘದ ಮುಖಂಡರಾದ ಬೈಲಪ್ಪ, ಸುರೇಶ್ ಸೇರಿದಂತೆ ಸಮಾಜದ ಮುಖಂಡರಿಗೆ ಚುನಾವಣೆಗೆ ಟಿಕೆಟ್ ನೀಡಿಲ್ಲ. ಕುರುಬ ಜನಾಂಗದ ಹೊಸ ತಲೆಮಾರಿನ ನಾಯಕರನ್ನು ಬೆಳೆಸಲು ಡಾ.ಜಿ.ಪರಮೇಶ್ವರ, ಟಿ.ಬಿ.ಜಯಚಂದ್ರ, ಕೆ.ಎನ್.ರಾಜಣ್ಣ ಸೇರಿದಂತೆ ಹಿರಿಯ ನಾಯಕರು ಆಸಕ್ತಿ ತೋರುತ್ತಿಲ್ಲ ಎಂದು ಆರೋಪಿಸಿದರು.
ಈ ಪರಿಸ್ಥಿತಿ ಹೀಗೆಯೇ ಮುಂದುವರಿದರೆ, ಸಾಕಷ್ಟು ಜನಸಂಖ್ಯೆಯನ್ನು ಹೊಂದಿರುವ ಶಿರಾ, ತಿಪಟೂರು ಮತ್ತು ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷವು ಸಮುದಾಯದ ಕೋಪವನ್ನು ಎದುರಿಸಬೇಕಾಗುತ್ತದೆ,'' ಎಂದು ಎಚ್ಚರಿಸಿದರು.
ಇದೇ ವೇಲೆ ಮಾತನಾಡಿದ ಕನಕ ಯುವ ಸೇನೆ ಮುಖಂಡ ಕೆಂಪರಾಜು ಅವರು, ಸಮುದಾಯದ ಸದಸ್ಯರನ್ನು ಸಂಘಟನಾ ಹುದ್ದೆಗಳಿಗೆ ಪರಿಗಣಿಸುತ್ತಿಲ್ಲ. ಈ ವಿಚಾರವನ್ನು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಮುಂದೆ ಮಂಡಿಸಿದ್ದೇವೆ ಎಂದು ಹೇಳಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ