ಸಾಂದರ್ಭಿಕ ಚಿತ್ರ
ರಾಜ್ಯ
ಕರ್ತವ್ಯ ಲೋಪ: ಇನ್ಸ್ ಪೆಕ್ಟರ್ ಅಮಾನತು
ಕರ್ತವ್ಯಲೋಪ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೆಆರ್ ಪುರಂ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್'ನ್ನು ಅಮಾನತುಗೊಳಿಸಲಾಗಿದೆ.
ಬೆಂಗಳೂರು: ಕರ್ತವ್ಯಲೋಪ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೆಆರ್ ಪುರಂ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್'ನ್ನು ಅಮಾನತುಗೊಳಿಸಲಾಗಿದೆ.
ಅನುಮತಿ ಅವಧಿ ಮೀರಿ ಪಬ್ ತೆರೆದವರ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಇನ್ಸ್‌ಪೆಕ್ಟರ್ ನಂದೀಶ್ ವಿಫಲರಾಗಿದ್ದರು ಎಂದು ತಿಳಿದುಬಂದಿದೆ.
ನಗರದ ಕೆಆರ್ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಪಬ್ ಮೇಲೆ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಅಧಿಕಾರಿಗಳು ಇತ್ತೀಚೆಗೆ ದಾಳಿ ನಡೆಸಿದ್ದು, ಅಬಕಾರಿ ನಿಯಮ ಉಲ್ಲಂಘಿಸಿರುವುದು ಪತ್ತೆಯಾಗಿದೆ. ಪ್ರಕರಣದ ತನಿಳೆ ವೇಳೆ ಇನ್ಸ್‌ಪೆಕ್ಟರ್ ನಂದೀಶ್ ಅವರು ತಮ್ಮ ಕರ್ತವ್ಯ ನಿರ್ವಹಿಸುವಲ್ಲಿ ವಿಫಲರಾಗಿದ್ದಾರೆಂದು ತಿಳಿದುಬಂದಿತ್ತು.
ಈ ಹಿನ್ನೆಲೆಯಲ್ಲಿ ಇಲಾಖಾ ವಿಚಾರಣೆಗಾಗಿ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ