ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 112 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟಾರೇ ಸೋಂಕಿತರ ಸಂಖ್ಯೆ 40,67,953ಕ್ಕೆ ಏರಿಕೆಯಾಗಿದೆ.
ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಒಂದು ಸಾವಿನ ಪ್ರಕರಣ ವರದಿಯಾಗಿದೆ. ಹೀಗಾಗಿ ಸಾವಿನ ಸಂಖ್ಯೆ 40254 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ಇಂದು 38 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 1873940ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲೂ ಕೊರೋನಾದಿಂದ ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.
ರಾಜ್ಯದಲ್ಲಿ ಇಂದು 42 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 40,25,331ಕ್ಕೆ ಏರಿಕೆಯಾಗಿದೆ. ಇನ್ನು 2326 ಸಕ್ರಿಯ ಪ್ರಕರಣಗಳಿವೆ.
Advertisement