ಶಿವಮೊಗ್ಗ: ಸಾವರ್ಕರ್ ಕಾರ್ಯಕ್ರಮಕ್ಕೆ ತೆರಳಿದ್ದವರ ಮೇಲೆ ಹಲ್ಲೆ, ಪೊಲೀಸರಿಂದ ಬಿಗಿ ಬಂದೋಬಸ್ತ್
ಶಿವಮೊಗ್ಗ: ಶಿವಮೊಗ್ಗದಲ್ಲಿ ಕೋಮು ಸೌಹಾರ್ದತೆ ದೃಷ್ಟಿಯಿಂದ ಮತ್ತೆ ಪರಿಸ್ಥಿತಿ ಹದಗೆಡುವ ಲಕ್ಷಣಗಳು ಗೋಚರಿಸಿದ್ದು ಸಾವರ್ಕರ್ ಕಾರ್ಯಕ್ರಮಕ್ಕೆ ಹೋಗಿದ್ದ ವ್ಯಕ್ತಿ ಮೇಲೆ ದಾಳಿ ನಡೆಸಿದ ಮೂವರು ವ್ಯಕ್ತಿಗಳು ಆರ್ ಎಸ್ಎಸ್ ವಿರೋಧಿ ಘೋಷಣೆ ಕೂಗಿದ್ದಾರೆ.
ಈ ಘಟನೆಯಿಂದ ಎಚ್ಚೆತ್ತಿರುವ ಶಿವಮೊಗ್ಗ ಪೊಲೀಸರು, ನಗರದಲ್ಲಿ ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಈ ವರ್ಷ ಫೆ.20 ರಂದು ಶಿವಮೊಗ್ಗದಲ್ಲಿ ಹಿಂದು ಕಾರ್ಯಕರ್ತ ಹರ್ಷನ ಹತ್ಯೆಯಾಗಿತ್ತು.
ಈಗ ದಾಳಿಗೆ ಒಳಗಾದ ವ್ಯಕ್ತಿ ಪ್ರಕಾಶ್ ತಮ್ಮ ಮೇಲೆ ದಾಳಿ ಮಾಡಿದವರು ಸ್ಥಳೀಯರಲ್ಲ ಎಂದು ಹೇಳಿದ್ದು ತಾವು ಸಾವರ್ಕರ್ ಅವರಿಗೆ ಸಂಬಂಧಿಸಿದ ಕಾರ್ಯಕ್ರಮ ಮುಗಿಸಿ ಬರುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಹೇಳಿದ್ದಾರೆ.
ಭರಮಪ್ಪ ಲೇಔಟ್ ನಲ್ಲಿ ದಾಳಿ ನಡೆದಿದ್ದು ಬೈಕ್ ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಈ ಕೃತ್ಯ ಎಸಗಿ ಆರ್ಎಸ್ಎಸ್ ಹಾಗೂ ಹಿಂದೂ ಕಾರ್ಯಕರ್ತರ ವಿರುದ್ಧ ಘೋಷಣೆ ಕೂಗಿದ್ದಾರೆ. ದಾಳಿಯಲ್ಲಿ ಪ್ರಕಾಶ್ ತಲೆಗೆ ಪೆಟ್ಟು ಬಿದ್ದಿದ್ದು, ಆತ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ