ಯಾದಗಿರಿ: ಕಲುಷಿತ ನೀರು ಕುಡಿದು ಓರ್ವ ಸಾವು, 37 ಮಂದಿ ಅಸ್ವಸ್ಥ

ಕಲುಷಿತ ನೀರು ಕುಡಿದು ಓರ್ವ ಸಾವನ್ನಪ್ಪಿ, 37 ಮಂದಿ ಅಸ್ವಸ್ಥಗೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹೊಟ್‌ಪೇಟ್ ಗ್ರಾಮದಲ್ಲಿ ನಡೆದಿದೆ.
ಶಹಾಪುರ ತಹಶೀಲ್ದಾರ್ ಮಧುರಾಜ್
ಶಹಾಪುರ ತಹಶೀಲ್ದಾರ್ ಮಧುರಾಜ್

ಯಾದಗಿರಿ: ಕಲುಷಿತ ನೀರು ಕುಡಿದು ಓರ್ವ ಸಾವನ್ನಪ್ಪಿ, 37 ಮಂದಿ ಅಸ್ವಸ್ಥಗೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹೊಟ್‌ಪೇಟ್ ಗ್ರಾಮದಲ್ಲಿ ನಡೆದಿದೆ. 

ಮೃತ ವ್ಯಕ್ತಿಯನ್ನು ಹೊನ್ನಪ್ಪ ಗೌಡ ಎಂದು ಗುರುತಿಸಲಾಗಿದೆ. ಶನಿವಾರದಿಂದ ಇಲ್ಲಿಯವರೆಗೆ ಹೊಟ್‌ಪೇಟೆ ಗ್ರಾಮದಲ್ಲಿ 37 ಪ್ರಕರಣಗಳು ವರದಿಯಾಗಿವೆ. ಆದರೆ ವೈದ್ಯಕೀಯ ವರದಿ ಪ್ರಕಾರ ಹೊನ್ನಪ್ಪ ಗೌಡ ಸಾವಿಗೆ ಕಲುಷಿತ ನೀರು ಸೇವನೆಯ ಜೊತೆಗೆ ಬೇರೆ ಕಾರಣಗಳೂ ಇವೆ ಎಂದು ಹೇಳಿದ್ದಾರೆ. ಕಳೆದ ಮೂರು ದಿನಗಳಲ್ಲಿ ಗ್ರಾಮದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಆದರೆ, ಅವರ ಸಾವು ಕಲುಷಿತ ನೀರಿನಿಂದ ಸಂಭವಿಸಿಲ್ಲ ಎಂದು ಸಂಬಂಧವಿಲ್ಲ ಎಂದು ಶಹಾಪುರ ತಹಶೀಲ್ದಾರ್ ಮಧುರಾಜ್ ಹೇಳಿದ್ದಾರೆ.

ಭಾನುವಾರ ಹೊಟ್‌ಪೇಟ್‌ ಗ್ರಾಮಕ್ಕೆ ಭೇಟಿ ನೀಡಿದ್ದೆ. ಈ ವೇಳೆ ಗ್ರಾಮದ ನಿವಾಸಿಗಳು ಕೆಲ ಪೈಪ್‌ಗಳು ಹಾಳಾಗಿದ್ದರಿಂದ ಮಳೆ ನೀರು, ಚರಂಡಿ ನೀರು ಕುಡಿಯುವ ನೀರನ್ನು ಸೇರಿಕೊಂಡಿದೆ ಎಂದು ಗ್ರಾಮದ ನಿವಾಸಿಗಳು ದೂರು ನೀಡಿದ್ದಾರೆ ಎಂದು ತಿಳಿಸಿದ್ದಾರೆ. 

ಈ ನಡುವೆ ಗ್ರಾಮದಲ್ಲಿರುವ ಓವರ್‌ಹೆಡ್‌ ಟ್ಯಾಂಕ್‌ ಕೂಡ ಹಲವು ತಿಂಗಳಿಂದ ಸ್ವಚ್ಛಗೊಳಿಸಿಲ್ಲ ಎಂಬ ಮಾತುಗಳು ಗ್ರಾಮಸ್ಥರಿಂದ ಕೇಳಿಬರುತ್ತಿದೆ. 

ಬೆಳೆಗಳಿಗೆ ಕೀಟನಾಶಕ ಸಿಂಪಡಿಸುವ ಸಮಯದಲ್ಲಿ ಆ ಗಾಳಿಯನ್ನು ಉಸಿರಾಡಿದಾಗಲೂ ಜನರು ಅನಾರೋಗ್ಯಕ್ಕೆ ಒಳಗಾಗುವ ಸಾಧ್ಯತೆಗಳಿರುತ್ತವೆ. ಹೊಟ್‌ಪೇಟ್‌ನಲ್ಲಿರುವ ಪಿಎಚ್‌ಸಿ ಉಪ ಕೇಂದ್ರದಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ 31 ಮಂದಿ ಈಗಾಗಲೇ ಬಿಡುಗಡೆಯಾಗಿದ್ದು, ಇನ್ನೂ 6 ಮಂದಿಗೆ ಚಿಕಿತ್ಸೆ ಮುಂದುವರೆದಿದೆ. ಅಸ್ವಸ್ಥರಿಗೆ ಚಿಕಿತ್ಸೆ ನೀಡಲು ವೈದ್ಯರ ತಂಡ ಮತ್ತು ಆಂಬ್ಯುಲೆನ್ಸ್ ಅನ್ನು ಗ್ರಾಮದಲ್ಲಿ ನಿಯೋಜಿಸಲಾಗಿದೆ ಎಂದು ಅವರು ಹೇಳಿದರು.

15 ದಿನಗಳ ಹಿಂದೆಯಷ್ಟೇ ಜೇವರ್ಗಿ ತಾಲೂಕಿನ (ಕಲಬುರಗಿ ಜಿಲ್ಲೆ) ಮಂದೇವಾಳ ಗ್ರಾಮದ 23 ಮಂದಿ ಕಲುಷಿತ ನೀರು ಕುಡಿದು ಅಸ್ವಸ್ಥರಾಗಿದ್ದರು. ಇದೇ ಕಾರಣಕ್ಕೆ ಜೂನ್‌ನಲ್ಲಿ ರಾಯಚೂರು ನಗರದಲ್ಲಿ ಐವರು ಸಾವನ್ನಪ್ಪಿ, ಹಲವರು ಅಸ್ವಸ್ಥರಾಗಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com