ನನ್ನ ಭೇಟಿ ವೇಳೆ ಬೆಂಗಳೂರು ನಗರ ವಾಸಿಗಳಿಗೆ ತೊಂದರೆ ಕೊಡದಿರಿ: ಸರ್ಕಾರಕ್ಕೆ ಪ್ರಧಾನಿ ಮೋದಿ ಸೂಚನೆ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನವೆಂಬರ್ 11 ರಂದು ಬೆಂಗಳೂರಿಗೆ ಭೇಟಿ ನೀಡುತ್ತಿದ್ದು, ಈ ಸಂದರ್ಭದಲ್ಲಿ ನಗರದ ವಾಹನ ಸವಾರರಿಗೆ ಯಾವುದೇ ಸಮಸ್ಯೆಗಳಾಗದಂತೆ ನೋಡಿಕೊಳ್ಳಲು ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದಾರೆಂದು ತಿಳಿದುಬಂದಿದೆ.
ಪ್ರಧಾನಿ ಮೋದಿ
ಪ್ರಧಾನಿ ಮೋದಿ
Updated on

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನವೆಂಬರ್ 11 ರಂದು ಬೆಂಗಳೂರಿಗೆ ಭೇಟಿ ನೀಡುತ್ತಿದ್ದು, ಈ ಸಂದರ್ಭದಲ್ಲಿ ನಗರದ ವಾಹನ ಸವಾರರಿಗೆ ಯಾವುದೇ ಸಮಸ್ಯೆಗಳಾಗದಂತೆ ನೋಡಿಕೊಳ್ಳಲು ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದಾರೆಂದು ತಿಳಿದುಬಂದಿದೆ. 

ಮೋದಿ ಅವರು ನವೆಂಬರ್ 11 ರಂದು ಬೆಂಗಳೂರಿಗೆ ಭೇಟಿ ನೀಡುವ ಸಂದರ್ಭದಲ್ಲಿ ದಕ್ಷಿಣ ಭಾರತದ ಮೊದಲ 'ವಂದೇ ಭಾರತ್ ಎಕ್ಸ್‌ಪ್ರೆಸ್' ರೈಲಿಗೆ ಚಾಲನೆ ನೀಡಲಿದ್ದಾರೆ.

ಬೆಂಗಳೂರು ಸಂಸ್ಥಾಪಕ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ, ರಾಜ್ಯ ರಾಜಧಾನಿಗೆ ಭೇಟಿ ನೀಡಿದ ಸಂದರ್ಭದಲ್ಲಿ 5,000 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್ ಅನ್ನು ಉದ್ಘಾಟಿಸಲಿದ್ದಾರೆ.

ನವೆಂಬರ್ 11 ರಂದು ಬೆಂಗಳೂರಿನಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳ ಸಿದ್ಧತೆಗಳ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಪ್ರಧಾನಿ ಮೋದಿಯವರೊಂದಿಗೆ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಿದ್ದರು. 

ಈ ವೇಳೆ ಮೋದಿಯವರು, ಸಿಎಂ ಬೊಮ್ಮಾಯಿ ಮತ್ತು ಇತರ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳಿಗೆ ತಮ್ಮ ಎಲ್ಲಾ ಕಾರ್ಯಕ್ರಮಗಳ ಸಂದರ್ಭದಲ್ಲಿ ಜನರಿಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ವ್ಯವಸ್ಥೆ ಮಾಡುವಂತೆ ಸೂಚಿಸಿದರು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ನವೆಂಬರ್ 11 ರಂದು ಬೆಳಗ್ಗೆ 10 ಗಂಟೆಗೆ ನಗರದ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ. ಬಳಿಕ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಚಾಲನೆ ನೀಡಲಿದ್ದಾರೆ. ರೈಲು ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್ ಉದ್ಘಾಟನೆ ಹಾಗೂ 108 ಅಡಿ ಎತ್ತರದ ಕೆಂಪೇಗೌಡ ಪ್ರತಿಮೆ ಅನಾವರಣ ಮಾಡಲಿದ್ದಾರೆ. ಮಧ್ಯಾಹ್ನ 2 ಗಂಟೆ ಸುಮಾರಿಗೆ ಆಂಧ್ರಪ್ರದೇಶಕ್ಕೆ ತೆರಳುವ ಮುನ್ನ ವಿಮಾನ ನಿಲ್ದಾಣದ ಬಳಿ ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ವಿಮಾನ ನಿಲ್ದಾಣದ ಬಳಿ ಪ್ರಧಾನಿಯವರ ರ್ಯಾಲಿಯಲ್ಲಿ ಸುಮಾರು ಎರಡು ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. 

ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡ ಬಡಾವಣೆಯ ಉದ್ಯಾನವನದ ಅಭಿವೃದ್ಧಿಗೆ ಬಳಸಲು ರಾಜ್ಯಾದ್ಯಂತ ಪವಿತ್ರ ಮಣ್ಣನ್ನು ಸಂಗ್ರಹಿಸಲು ಸರ್ಕಾರ ಇತ್ತೀಚೆಗೆ ಅಭಿಯಾನವನ್ನು ಪ್ರಾರಂಭಿಸಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com