ಭಗತ್ ಸಿಂಗ್ ಪಾತ್ರ ಅಭ್ಯಾಸ ವೇಳೆ ಫ್ಯಾನಿಗೆ ಹಗ್ಗ ಬಿಗಿದು ಬಾಲಕ ಆತ್ಮಹತ್ಯೆ: ಮುಗಿಲುಮುಟ್ಟಿದ ಪೋಷಕರ ಆಕ್ರಂದನ

ಈಗಿನ ಕಾಲದ ಮಕ್ಕಳು ಬಹಳ ಸೂಕ್ಷ್ಮ, ಒಂಚೂರು ಹೆಚ್ಚು ಕಡಿಮೆ ಆದರೂ ಪ್ರಾಣವನ್ನೇ ಬಿಡುವ ಮನಸ್ಥಿತಿಯನ್ನು ಹೊಂದಿರುತ್ತಾರೆ ಎಂದು ಜನಸಾಮಾನ್ಯರು ಮಾತನಾಡಿಕೊಳ್ಳುವುದನ್ನು ಕೇಳಿದ್ದೇವೆ. ಕೋಟೆನಾಡು ಚಿತ್ರದುರ್ಗದಲ್ಲಿ ಅಂತಹದ್ದೊಂದು ಅಚಾತುರ್ಯ ನಡೆದುಹೋಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಚಿತ್ರದುರ್ಗ: ಈಗಿನ ಕಾಲದ ಮಕ್ಕಳು ಬಹಳ ಸೂಕ್ಷ್ಮ, ಒಂಚೂರು ಹೆಚ್ಚು ಕಡಿಮೆ ಆದರೂ ಪ್ರಾಣವನ್ನೇ ಬಿಡುವ ಮನಸ್ಥಿತಿಯನ್ನು ಹೊಂದಿರುತ್ತಾರೆ ಎಂದು ಜನಸಾಮಾನ್ಯರು ಮಾತನಾಡಿಕೊಳ್ಳುವುದನ್ನು ಕೇಳಿದ್ದೇವೆ. ಕೋಟೆನಾಡು ಚಿತ್ರದುರ್ಗದಲ್ಲಿ ಅಂತಹದ್ದೊಂದು ಅಚಾತುರ್ಯ ನಡೆದುಹೋಗಿದೆ.

ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಬಗ್ಗೆ ನಾವೆಲ್ಲಾ ಕೇಳಿದ್ದೇವೆ, ಓದಿದ್ದೇವೆ, ಭಗತ್ ಸಿಂಗ್ ಜೀವನ ಅನೇಕರಿಗೆ ಸ್ಪೂರ್ತಿಯಾಗಬಹುದು. ಆದರೆ ನೇಣಿಗೆ ಕೊರಳೊಡ್ಡಿದ ಭಗತ್ ಸಿಂಗ್ (Bhagat Singh) ಪಾತ್ರವನ್ನು ಮಾಡಲು ಹೊರಟ ಬಾಲಕನೊಬ್ಬ ನೇಣಿಗೆ ಶರಣಾಗಿದ್ದಾನೆ. ಆತನ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ನವೆಂಬರ್ 1ರಂದು ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಶಾಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆಂದು ಬಾಲಕ ಭಗತ್ ಸಿಂಗ್ ಪಾತ್ರವನ್ನು ಅಭ್ಯಾಸ ಮಾಡುತ್ತಿದ್ದ. ಶಾಲೆಯಿಂದ ಮನೆಗೆ ಬಂದು ಪಾತ್ರವನ್ನು ಅಭ್ಯಾಸ ಮಾಡುತ್ತಿರುವಾಗ ನಿಜಯವಾಗಿಯೂ ಫ್ಯಾನಿಗೆ ಹಗ್ಗ ಬಿಗಿದು ಕೊರಳೊಡ್ಡಿ ಆತ್ಮಹತ್ಯೆಗೆ ಶರಣಾಗಿದ್ದಾನೆ. 

 ಮೃತ ಬಾಲಕನನ್ನು ಚಿತ್ರದುರ್ಗದ ಕೆಳಗೋಟೆ ಬಡಾವಣೆಯ ಸಂಜಯ್ ಗೌಡ(12ವ) ಎಂದು ಗುರುತಿಸಲಾಗಿದೆ. ಇಲ್ಲಿನ ಎಸ್‌ಎಲ್‌ವಿ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿದ್ದ ಸಂಜಯ್, ಭಗತ್ ಸಿಂಗ್ ಪಾತ್ರದಲ್ಲಿ ಅಭಿನಯಿಸಲು ಭಾರೀ ಸಿದ್ಧತೆ ನಡೆಸುತ್ತಿದ್ದ, ನಿನ್ನೆ ಮನೆಗೆ ಬಂದ ಬಳಿಕ ರಿಹರ್ಸಲ್‌ಗೆ ಮುಂದಾಗಿದ್ದ ಸಂಜಯ್, ಮನೆಯಲ್ಲಿ ಯಾರೂ ಇಲ್ಲದ ವೇಳೆ ಫ್ಯಾನಿಗೆ ನೂಲಿನ ಹಗ್ಗ ಬಿಗಿದು ಮಂಚದ ಮೇಲೆ ನಿಂತಿದ್ದಾನೆ. ಬಳಿಕ ತನ್ನ ಮುಖಕ್ಕೆ ಉಲ್ಲನ್ ಟೋಪಿ ಹಾಕಿಕೊಂಡು ಮಂಚದಿಂದ ಜಿಗಿದಿದ್ದಾನೆ. ಜಿಗಿದ ರಭಸಕ್ಕೆ ಸ್ಥಳದಲ್ಲಿಯೇ ಸಂಜಯ್ ಪ್ರಾಣಪಕ್ಷಿ ಹಾರಿಹೋಗಿದೆ. 

ಸಂಜೆ ಮನೆಗೆ ಬಂದ ಪೋಷಕರು ಮಗ ಫ್ಯಾನಿನಲ್ಲಿ ನೇತಾಡುತ್ತಿರುವುದನ್ನು ಕಂಡು ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಷ್ಟೋತ್ತಿಗಾಗಲೇ ಬಾಲಕ ಕೊನೆಯುಸಿರೆಳೆದಿದ್ದ. ಚಿತ್ರದುರ್ಗ ಬಡಾವಣೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com