ನಾಳೆ ಮಂಗಳೂರಿಗೆ ಪ್ರಧಾನಿ ಮೋದಿ ಆಗಮನ: ಪೆಟ್ರೋಲಿಯಂ, ರಿಫೈನರಿ ಯೋಜನೆಗಳಿಗೆ ಶಂಕುಸ್ಥಾಪನೆ

ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಮಂಗಳೂರಿಗೆ ಆಗಮಿಸುತ್ತಿದ್ದು, ನವ ಮಂಗಳೂರು ಬಂದರು ಪ್ರಾಧಿಕಾರ(ಎನ್‌ಎಂಪಿಎ)ದ ಆವರಣ ಮತ್ತು ಗೋಲ್ಡ್ ಫಿಂಚ್ ಸಿಟಿಯಲ್ಲಿ ಭರದ ಸಿದ್ಧತೆ ನಡೆದಿದೆ.
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಮಂಗಳೂರಿಗೆ ಆಗಮಿಸುತ್ತಿದ್ದು, ನವ ಮಂಗಳೂರು ಬಂದರು ಪ್ರಾಧಿಕಾರ(ಎನ್‌ಎಂಪಿಎ)ದ ಆವರಣ ಮತ್ತು ಗೋಲ್ಡ್ ಫಿಂಚ್ ಸಿಟಿಯಲ್ಲಿ ಭರದ ಸಿದ್ಧತೆ ನಡೆದಿದೆ.

ಕೇಂದ್ರ ಬಂದರು, ಹಡಗು ಮತ್ತು ಜಲಮಾರ್ಗ ಸಚಿವ ಸರ್ಬಾನಂದ ಸೋನೋವಾಲ್ ಹಾಗೂ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ  ನಳಿನ್ ಕುಮಾರ್ ಕಟೀಲ್ ಕಾರ್ಯಕ್ರಮ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. 

ಪ್ರಧಾನಿ ಮೋದಿ ಅವರು ಶುಕ್ರವಾರ ಮಧ್ಯಾಹ್ನ 12.55 ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು,  ಬರೋಬ್ಬರಿ 3800 ಕೋಟಿ ರೂ. ಯೋಜನೆಗೆ‌ ಪ್ರಧಾನಿ ‌ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಮಂಗಳೂರಿನ ಗೋಲ್ಡ್ ಪಿಂಚ್ ಸಿಟಿ ಮೈದಾನದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಕೇಂದ್ರ ‌ಮತ್ತು ರಾಜ್ಯ ಸರ್ಕಾರದ ‌ಫಲಾನುಭವಿಗಳ ಸಮಾವೇಶದಲ್ಲಿ ಮೋದಿ ಮಾತನಾಡನಾಡಲಿದ್ದಾರೆ. 

ಗೋಲ್ಡ್‌ಫಿಂಚ್ ಸಿಟಿ, ಕುಲೂರ್‌ನಲ್ಲಿ ಅವರು ಕಂಟೈನರ್‌ಗಳು ಮತ್ತು ಇತರ ಸರಕುಗಳನ್ನು ನಿರ್ವಹಿಸಲು 281 ಕೋ. ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ನವ ಮಂಗಳೂರು ಬಂದರಿನ 14ನೇ ಬರ್ತ್ ಯಾಂತ್ರೀಕರಣವನ್ನು ರಾಷ್ಟ್ರಕ್ಕೆ ಅರ್ಪಿಸುತ್ತಾರೆ. ನಂತರ ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್(MRPL)ನ ಬಿಎಸ್ VI ಉನ್ನತೀಕರಣ ಯೋಜನೆ ಮತ್ತು ಸಮುದ್ರದ ಉಪ್ಪು ನೀರನ್ನು ಸಂಸ್ಕರಿಸಿ ಬಳಸಿಕೊಳ್ಳುವ ಮಹತ್ವದ ಯೋಜನೆಗೆ ಚಾಲನೆ ನೀಡಲಿದ್ದಾರೆ. ಬಳಿಕ ಸಂಜೆ 4.20ಕ್ಕೆ ದೆಹಲಿಗೆ ತೆರಳಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com