ಕರಾವಳಿ ಕರ್ನಾಟಕ ಅಭಿವೃದ್ಧಿಗೆ ಪ್ರಧಾನಿ ಮೋದಿಯಿಂದ 3,800 ಕೋಟಿ ರೂ. ಗಳ ಯೋಜನೆಗಳಿಗೆ ಚಾಲನೆ: ಸಿಎಂ ಬೊಮ್ಮಾಯಿ

ಇಂದು ಕರಾವಳಿ ಜಿಲ್ಲೆಯ ನಗರಿ ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ಇಂದು ಅಪರಾಹ್ನ ನಗರದಲ್ಲಿ  3,800 ಕೋಟಿ ವೆಚ್ಚದ ಯೋಜನೆಗಳಿಗೆ ಮೋದಿ ಚಾಲನೆ ನೀಡಲಿದ್ದಾರೆ. ಬಳಿಕ ಪ್ರಧಾನಿ ಮೋದಿ ಕಾರ್ಯಕ್ರಮ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಕಾಂಚಿ ಕಾಮಕೋಟಿ ಪೀಠದಲ್ಲಿ ಪ್ರಧಾನಿ ನರೇಂದ್ರ ಮೋದಿ
ಕಾಂಚಿ ಕಾಮಕೋಟಿ ಪೀಠದಲ್ಲಿ ಪ್ರಧಾನಿ ನರೇಂದ್ರ ಮೋದಿ
Updated on

ಮಂಗಳೂರು: ಇಂದು ಕರಾವಳಿ ಜಿಲ್ಲೆಯ ನಗರಿ ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ಇಂದು ಅಪರಾಹ್ನ ನಗರದಲ್ಲಿ  3,800 ಕೋಟಿ ವೆಚ್ಚದ ಯೋಜನೆಗಳಿಗೆ ಮೋದಿ ಚಾಲನೆ ನೀಡಲಿದ್ದಾರೆ. ಬಳಿಕ ಪ್ರಧಾನಿ ಮೋದಿ ಕಾರ್ಯಕ್ರಮ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಕಾರ್ಯಕ್ರಮಕ್ಕೆ 1 ಲಕ್ಷಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆ ಇದ್ದು, ಕೃಷಿ ಸಮ್ಮಾನ್, ವಿದ್ಯಾನಿಧಿ ಸೇರಿ ಹಲವು ಫಲಾನುಭವಿಗಳು ಭಾಗಿಯಾಗಲಿದ್ದಾರೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಿಂದ ಜನ ಆಗಮಿಸುತ್ತಿದ್ದು, ಜನರನ್ನು ಕರೆತರಲು 2 ಸಾವಿರ ಬಸ್​ಗಳ ವ್ಯವಸ್ಥೆ ಮಾಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ. 

ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅವರ ಸಂಪುಟ ಸಹೋದ್ಯೋಗಿಗಳು, ಬಿಜೆಪಿ ನಾಯಕರು ಹಲವರು ಮಂಗಳೂರಿಗೆ ಆಗಮಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿರುವ ಯೋಜನೆಗಳು ಕರಾವಳಿ ಕರ್ನಾಟಕದ ಬೆಳವಣಿಗೆಗೆ ಉತ್ತೇಜನ ನೀಡಲಿವೆ. ಪ್ರಧಾನಿ ಮೋದಿಯವರ ಕರಾವಳಿ ನಗರ ಭೇಟಿಗೆ ಮುನ್ನ ಮುಖ್ಯಮಂತ್ರಿಗಳು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. 

ಬಹಳ ದಿನಗಳ ನಂತರ ಪ್ರಧಾನಿ ಮೋದಿ ಕರಾವಳಿ ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದಾರೆ. ತಮ್ಮ ಭೇಟಿಯ ವೇಳೆ ಕರಾವಳಿ ಪ್ರದೇಶಕ್ಕೆ 3,800 ಕೋಟಿ ರೂಪಾಯಿಗಳ ಹಲವು ಯೋಜನೆಗಳನ್ನು ತಂದಿದ್ದಾರೆ. ಈ ಯೋಜನೆಗಳು ಕರಾವಳಿಯ ಅಭಿವೃದ್ಧಿಗೆ ಉತ್ತೇಜನ ನೀಡುತ್ತವೆ. ಪ್ರಧಾನಮಂತ್ರಿ ಮತ್ಸ್ಯ ಸಂಪದ ಕಾರ್ಯಕ್ರಮದಡಿಯಲ್ಲಿ ಪ್ರಧಾನಿ ಮೋದಿಯವರು 100 ಆಳ ಸಮುದ್ರ ಮೀನುಗಾರಿಕೆ ದೋಣಿಗಳನ್ನು ಮಂಜೂರು ಮಾಡಿದ್ದಾರೆ. ಅಲ್ಲದೆ, ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್‌ಗಳನ್ನು ಒದಗಿಸಿದ್ದು, ಅವರಿಗೆ ಯಾವುದೇ ತೊಂದರೆಯಿಲ್ಲದೆ ಸರ್ಕಾರದ ಸೌಲಭ್ಯಗಳು ಸಿಗುತ್ತವೆ. ರಾಜ್ಯ ಸರ್ಕಾರವೂ ಇದೇ ರೀತಿಯ ಹಲವಾರು ಯೋಜನೆಗಳನ್ನು ತಂದಿದೆ ಎಂದರು. 

ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ, ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಕಲ್ಲಿದ್ದಲು ಸಚಿವರಾದ ಪ್ರಲ್ಹಾದ್ ಜೋಶಿ, ಕೇಂದ್ರ ಬಂದರು, ಹಡಗು ಮತ್ತು ಜಲಸಾರಿಗೆ ಹಾಗೂ ಆಯುಷ್ ಸಚಿವರಾದ ಸರ್ಬಾನಂದ್ ಸೊನೊವಾಲ್, ಕೇಂದ್ರ ಇಂಧನ ಮತ್ತು ನೈಸರ್ಗಿಕ ಅನಿಲ ಸಚಿವರಾದ ಹರ್ದೀಪ್ ಸಿಂಗ್ ಪುರಿ, ಕೇಂದ್ರ ಬಂದರು, ಹಡಗು ಮತ್ತು ಜಲಸಾರಿಗೆ ರಾಜ್ಯ ಸಚಿವರಾದ ಶ್ರೀಪಾದ್ ಯೆಸ್ಸೊ ನಾಯಕ್, ಕೇಂದ್ರ ಬಂದರು, ಹಡಗು ಮತ್ತು ಜಲಸಾರಿಗೆ ರಾಜ್ಯ ಸಚಿವರಾದ ಶಂತನು ಠಾಕೂರ್ ಸೇರಿದಂತೆ ರಾಜ್ಯದ ಸಚಿವರು ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com