ಮುರುಘಾಶ್ರೀಗಳ ವಿರುದ್ಧದ 'ಗಂಭೀರ' ಆರೋಪದ ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕು: ಸಿದ್ದರಾಮಯ್ಯ ಆಗ್ರಹ

ಪ್ರಕರಣ್ಕೆ ಸಂಬಂಧಿಸಿದಂತೆ ಮೊಟ್ಟ ಮೊದಲ ಬಾರಿಗೆ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದಾರೆ. ಆರೋಪ ಗಂಭೀರ ಸ್ವರೂಪದ್ದಾಗಿದ್ದು ಸೂಕ್ತ ತನಿಖೆ ನಡೆಸಬೇಕು ಎಂದು ಹೇಳಿದ್ದಾರೆ
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಬಾಲಕಿಯರು ನೀಡಿರುವ ದೂರಿನ ಆಧಾರದ ಮೇಲೆ ಪೊಲೀಸರು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಕುರಿತಾಗಿ ಅವರು ಟ್ವೀಟ್ ಮಾಡಿದ್ದು, ಚಿತ್ರದುರ್ಗದ ಮುರುಘಾ ಮಠದ ಸ್ವಾಮಿಗಳ ವಿರುದ್ಧದ ಆರೋಪ ಗಂಭೀರ ಸ್ವರೂಪದ್ದಾಗಿದೆ. ಪೊಲೀಸರು ಯಾವುದೇ ಒತ್ತಡಕ್ಕೊಳಗಾಗದೆ ಸಂತ್ರಸ್ತ ವಿದ್ಯಾರ್ಥಿನಿಯರ ದೂರಿನ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಸತ್ಯಸಂಗತಿಯನ್ನು ಬಹಿರಂಗಗೊಳಿಸಬೇಕು. ಮುರುಘಾ ಶ್ರೀಗಳ ಪ್ರಕರಣದಲ್ಲಿ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಸತ್ಯಸಂಗತಿಯನ್ನು ಬಹಿರಂಗಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರಕರಣ್ಕೆ ಸಂಬಂಧಿಸಿದಂತೆ ಮೊಟ್ಟ ಮೊದಲ ಬಾರಿಗೆ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದಾರೆ. ಆರೋಪ ಗಂಭೀರ ಸ್ವರೂಪದ್ದಾಗಿದ್ದು ಸೂಕ್ತ ತನಿಖೆ ನಡೆಸಬೇಕು ಎಂದು ಹೇಳಿದ್ದಾರೆ.

ಅಪ್ರಾಪ್ತ ಚಾಲಕಿಯರಿಗೆ ಲೈಂಗಿಕ ಕಿರುಕುಳ ಕೊಟ್ಟ ಆರೋಪ ಮುರುಘಾ ಶ್ರೀಗಳ ಮೇಲಿದೆ. ಈಗಾಗಲೇ ಅವರ ಬಂಧನ ಆಗಿದ್ದು, ಇದೀಗ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನ್ಯಾಯಾಧೀಶರು ನೀಡಿದ್ದಾರೆ. ಶುಕ್ರವಾರ ಅವರನ್ನು ಚಿತ್ರದುರ್ಗ ಜಿಲ್ಲಾ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com