ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 312 ಸೇರಿ ರಾಜ್ಯದಲ್ಲಿ 600 ಮಂದಿಗೆ ಪಾಸಿಟಿವ್; 2 ಸಾವು

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 600 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,54,746ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 600 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,54,746ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಇಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40,205ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 312 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,66,560ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲಿ ಯಾವುದೇ ಕೊರೋನಾ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 589 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 40,09,287ಕ್ಕೆ ಏರಿಕೆಯಾಗಿದೆ. ಇನ್ನು 5,212 ಸಕ್ರಿಯ ಪ್ರಕರಣಗಳಿವೆ.

Related Stories

No stories found.

Advertisement

X
Kannada Prabha
www.kannadaprabha.com