ನೇಗಿನಹಾಳ ಬಸವಸಿದ್ದಲಿಂಗಸ್ವಾಮೀಜಿ
ನೇಗಿನಹಾಳ ಬಸವಸಿದ್ದಲಿಂಗಸ್ವಾಮೀಜಿ

ಇಬ್ಬರು ಮಹಿಳೆಯರ ಸಂಭಾಷಣೆಯಲ್ಲಿ ಹೆಸರು ಕೇಳಿಬಂದ ಆರೋಪ: ನೇಗಿನಾಳ ಬಸವಸಿದ್ಧಲಿಂಗ ಸ್ವಾಮೀಜಿ ಆತ್ಮಹತ್ಯೆ!

ಬಸವ ತತ್ವ ಪ್ರತಿಪಾದಕ, ಅನುಯಾಯಿ ನೇಗಿನಹಾಳ ಶ್ರೀ ಗುರು ಮಡಿವಾಳೇಶ್ವರ ಮಠದ ಬಸವ ಸಿದ್ದಲಿಂಗ ಸ್ವಾಮೀಜಿ ನೇಣಿಗೆ ಶರಣಾಗಿದ್ದಾರೆ.
Published on

ಬೆಳಗಾವಿ: ಬಸವ ತತ್ವ ಪ್ರತಿಪಾದಕ, ಅನುಯಾಯಿ ನೇಗಿನಹಾಳ ಶ್ರೀ ಗುರು ಮಡಿವಾಳೇಶ್ವರ ಮಠದ ಬಸವ ಸಿದ್ದಲಿಂಗ ಸ್ವಾಮೀಜಿ ನೇಣಿಗೆ ಶರಣಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದ ಶ್ರೀಗುರು ಮಡಿವಾಳೇಶ್ವರ ಮಠದ ಬಸವಸಿದ್ಧಲಿಂಗ ಸ್ವಾಮೀಜಿ ಅವರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮಠದ ಆವರಣ ಕೊಠಡಿಯಲ್ಲೇ ಸ್ವಾಮೀಜಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಗ್ಗೆ ಭಕ್ತರು ಗಮನಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಭಾನುವಾರ ರಾತ್ರಿ ಮಠದ ತಮ್ಮ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಆದರೆ, ಮುರುಘಾ ಶ್ರೀಗಳ ಪ್ರಕರಣದ ಬಗ್ಗೆ ಇಬ್ಬರು ಮಹಿಳೆಯರು ಮಾತನಾಡಿದ್ದಾರೆ ಎನ್ನಲಾದ ಆಡಿಯೋವೊಂದು ಭಾನುವಾರ ವೈರಲ್ ಆಗಿದೆ. ಅದರಲ್ಲಿ ಮಹಿಳೆಯರು ನೇಗಿನಹಾಳ ಸ್ವಾಮೀಜಿ ಹೆಸರನ್ನು ಸಹ ಉಲ್ಲೇಖಿಸಿ ಹೆಣ್ಣು ಮಕ್ಕಳೊಂದಿಗೆ ಅನೈತಿಕ ಸಂಪರ್ಕ ಹೊಂದಿದ್ದಾರೆಂದು ಮಾತನಾಡಿದ್ದರು ಎಂದು ಹೇಳಲಾಗಿದೆ.

ರಾಜ್ಯದ ಹಲವು ಮಠಾಧೀಶರು ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಒಂದು ಮಹಿಳೆ ಸಂಭಾಷಣೆಯಲ್ಲಿ ಆರೋಪಿಸುತ್ತಾರೆ. ಆ ಸಂಭಾಷಣೆಯ ನಡುವೆ ಬಸವಸಿದ್ಧಲಿಂಗ ಸ್ವಾಮಿಯವರ ಹೆಸರನ್ನು ಮಹಿಳೆ ಉಲ್ಲೆಖಿಸುತ್ತಾಳೆ. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆದ ಕಾರಣದಿಂದಲೇ ಶ್ರೀಗಳು ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ಇದುವರೆಗೂ ತಿಳಿದುಬಂದಿಲ್ಲ. ಆತ್ಮಹತ್ಯೆಗೂ ಮುನ್ನ ಡೆತ್‌ ನೋಟ್‌ ಬರೆದಿಟ್ಟಿದ್ದಾರೆ ಎನ್ನಲಾಗಿದ್ದು, ಅದರಲ್ಲಿ ಯಾವ ಕಾರಣ ನೀಡಿದ್ದಾರೆ ಎಂಬುದನ್ನು ಪೊಲೀಸರು ಇನ್ನೂ ಮಾಹಿತಿ ನೀಡಿಲ್ಲ.

ಇದರಿಂದ ಸ್ವಾಮೀಜಿ ಆಘಾತಗೊಂಡಿದ್ದರು ಎನ್ನಲಾಗಿದೆ. ಈ ಬಗ್ಗೆ ನಿನ್ನೆ ತಡ ರಾತ್ರಿವರೆಗೆ ಭಕ್ತರೊಂದಿಗೆ ಸಮಾಲೋಚನೆ ನಡೆಸಿದ ಸ್ವಾಮೀಜಿ, ನೀವೆಲ್ಲರೂ ನಮ್ಮನ್ನು ಸಂಶಯದಿಂದ ನೋಡುವಂತಾಗಿದೆ ಈ ಘಟನೆಯಿಂದ ಬದುಕಿರಬಾರದು ಎಂದೆನಿಸಿದೆ ಎಂದು ಹೇಳಿದ್ದರು ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com