ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 589 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 40,58,178ಕ್ಕೆ ಏರಿಕೆಯಾಗಿದೆ.
ಇಂದು 478 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಸೋಂಕಿನಿಂದ ಒಟ್ಟಾರೇ ಗುಣಮುಖರಾದವರ ಸಂಖ್ಯೆ 40,13,541ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸದ್ಯ 4,379 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ 299 ಹೊಸ ಪ್ರಕರಣ ಪತ್ತೆಯಾಗಿದ್ದು, ಒಟ್ಟಾರೇ ಸೋಂಕಿತರ ಸಂಖ್ಯೆ 18,68,378 ಆಗಿದೆ. 293 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟಾರೇ ಗುಣಮುಖರಾದವರ ಸಂಖ್ಯೆ 18,48,656 ಆಗಿದೆ. ಸದ್ಯ 2,739 ಸಕ್ರಿಯ ಪ್ರಕರಣಗಳಿವೆ.
ಇಂದು ಯಾವುದೇ ಸಾವು ಸಂಭವಿಸಿಲ್ಲ. ಆದರೆ, ಬಳ್ಳಾರಿಯಲ್ಲಿ ಸೋಂಕಿತರೊಬ್ಬರು ಮೃತಪಟ್ಟಿದ್ದಾರೆ. ಇದರೊಂದಿಗೆ ಒಟ್ಟಾರೇ ಮೃತರ ಸಂಖ್ಯೆ 40,216ಕ್ಕೆ ಏರಿಕೆಯಾಗಿದೆ.
Advertisement