ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 140 ಸೇರಿ ರಾಜ್ಯದಲ್ಲಿ 253 ಮಂದಿಗೆ ಪಾಸಿಟಿವ್, ಸಾವು ಶೂನ್ಯ

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ253  ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,61,716ಕ್ಕೆ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ253  ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,61,716ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 431 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 4017,872ಕ್ಕೆ ಏರಿಕೆಯಾಗಿದೆ. ಇನ್ನು 3568 ಸಕ್ರಿಯ ಪ್ರಕರಣಗಳಿವೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಯಾವುದೇ ಸಾವಿನ ಪ್ರಕರಣ ವರದಿಯಾಗಿಲ್ಲ. ಇದರೊಂದಿಗೆ ಸಾವಿನ ಸಂಖ್ಯೆ 40234 ಆಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 140 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,70,254ಕ್ಕೆ ಏರಿಕೆಯಾಗಿದೆ. ರಾಜಧಾನಿಯಲ್ಲಿ ಕೊರೋನಾದಿಂದ ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com