ರಶ್ಮಿ
ರಾಜ್ಯ
ಕುಡ್ಲಾದ ಕುವರಿ ರಶ್ಮಿಗೆ ಎನ್ಎಸ್ಎಸ್ ರಾಷ್ಟ್ರ ಪ್ರಶಸ್ತಿ; ಸಚಿವ ನಾರಾಯಣಗೌಡರಿಂದ ಅಭಿನಂದನೆ
ಎನ್‌ಎಸ್ಎಸ್ ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾಗಿರುವ ಮಂಗಳೂರಿನ ರಶ್ಮಿ ಅವರಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಬೆಂಗಳೂರು: ಎನ್‌ಎಸ್ಎಸ್ ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾಗಿರುವ ಮಂಗಳೂರಿನ ರಶ್ಮಿ ಅವರಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಕೇಂದ್ರ ಸರ್ಕಾರ ನೀಡುವ ರಾಷ್ಟ್ರೀಯ ಸೇವಾ ಯೋಜನೆಯ ಅತ್ಯುತ್ತಮ ಸ್ವಯಂಸೇವಕಿ ರಾಷ್ಟ್ರ ಪ್ರಶಸ್ತಿಗೆ ಸುರತ್ಕಲ್‌ನ ಗೋವಿಂದದಾಸ ಕಾಲೇಜಿನ ವಿದ್ಯಾರ್ಥಿನಿ ಕುಡ್ಲಾದ ಕುವರಿ ರಶ್ಮಿ ಆಯ್ಕೆಯಾಗಿದ್ದಾರೆ.
ಸೆಪ್ಟೆಂಬರ್ 24 ರಂದು ರಾಷ್ಟ್ರಪತಿ ಭವನದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.
ಎನ್‌ಎಸ್‌ಎಸ್ ಅತ್ಯುತ್ತಮ ಸ್ವಯಂ ಸೇವಕಿ ಪ್ರಶಸ್ತಿಗೆ ನಮ್ಮ ಕನ್ನಡದ ವಿದ್ಯಾರ್ಥಿನಿ ಆಯ್ಕೆಯಾಗಿರುವುದು ಸಂತಸ ತಂದಿದೆ. ರಾಜ್ಯದಲ್ಲಿರುವ ಎನ್‌ಎಸ್‌ಎಸ್ ಉತ್ತಮ ರೀತಿಯಲ್ಲಿ ಸೇವೆ ಸಲ್ಲಿಸುತ್ತಿದೆ. ಇವರಿಗೆ ಸಂದಿರುವ ರಾಷ್ಟ್ರ ಪ್ರಶಸ್ತಿ ಎನ್‌ಎಸ್‌ಎಸ್ ಘಟಕದ ಎಲ್ಲಾ ಸೇವಕ/ಸೇವಕಿಯರಿಗೆ ಪ್ರೇರಣೆಯಾಗಲಿ. ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಿನ ಪ್ರಶಸ್ತಿ ಕರ್ನಾಟಕಕ್ಕೆ ದೊರೆಯುವಂತಾಗಲಿ ಎಂದು ಸಚಿವ ಡಾ.ನಾರಾಯಣಗೌಡ ಅವರು ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ