ಜಿಮ್ ಗಳಲ್ಲಿ ಪ್ರೊಟೀನ್ ಪೌಡರ್ ಬಳಕೆ: ತಪ್ಪಿತಸ್ಥರ ವಿರುದ್ಧ ತನಿಖೆಗೆ ಸರ್ಕಾರ ನಿರ್ಧಾರ

ಜಿಮ್‌ಗಳಲ್ಲಿ ಬಾಡಿ ಬಿಲ್ಡಿಂಗ್ ಮಾಡುವವರಿಗೆ ನೀಡುವ ಪ್ರೊಟೀನ್ ಪೌಡರ್ ಅಪಾಯಕಾರಿಯಾಗಿದ್ದು, ಇದನ್ನು ಮಾರಾಟ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಶಾಸಕ ಸತೀಶ್ ರೆಡ್ಡಿ ವಿಧಾನಸಭೆಯಲ್ಲಿ ಒತ್ತಾಯಿಸಿದರು.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಜಿಮ್‌ಗಳಲ್ಲಿ ಬಾಡಿ ಬಿಲ್ಡಿಂಗ್ ಮಾಡುವವರಿಗೆ ನೀಡುವ ಪ್ರೊಟೀನ್ ಪೌಡರ್ ಅಪಾಯಕಾರಿಯಾಗಿದ್ದು, ಇದನ್ನು ಮಾರಾಟ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಶಾಸಕ ಸತೀಶ್ ರೆಡ್ಡಿ ವಿಧಾನಸಭೆಯಲ್ಲಿ ಒತ್ತಾಯಿಸಿದರು.

ಶೂನ್ಯ ವೇಳೆಯಲ್ಲಿ ಈ ವಿಚಾರವನ್ನು ಪ್ರಸ್ತಾಪ ಮಾಡಿದ ಬಿಜೆಪಿ ಶಾಸಕ ಸತೀಶ್ ರೆಡ್ಡಿ, ಜಿಮ್‌ ಗಳಲ್ಲಿ ಬಾಡಿ ಬಿಲ್ಡಿಂಗ್ ಮಾಡಲು ನೀಡುತ್ತಿರುವ ಪ್ರೊಟೀನ್ ಪೌಡರ್ ನಿಂದಾಗಿ ಪ್ರಾಣ ಹಾನಿಯಾಗುತ್ತಿದೆ. ನನ್ನ ಕ್ಷೇತ್ರದ ಯುವಕ ಪೌಡರ್ ಸೇವನೆಯಿಂದ ಸಾವನ್ನಪ್ಪಿದ್ದಾರೆ. ಎರಡು ವರ್ಷದಿಂದ ಲಿವರ್,‌ ಕಿಡ್ನಿ ಡ್ಯಾಮೇಜ್ ಆಗಿ ಸಾವನ್ನಪ್ಪಿದ್ದಾರೆ. ಚಿಕಿತ್ಸೆಗಾಗಿ ಸುಮಾರು 50ಲಕ್ಷ ರು ಹಣ ಖರ್ಚು ಮಾಡಲಾಯಿತು. ಅಕ್ರಮವಾಗಿ ಇದನ್ನು ಮಾರಾಟ ಮಾಡಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.

ಇಂತಹ ಪ್ರೊಟೀನ್ ಪೌಡರ್ ಮಾರಾಟ ನಿಷೇಧ ಮಾಡಬೇಕು ಹಾಗೂ ಮಾರಾಟ ಮಾಡುವವರಿಗೆ ಶಿಕ್ಷೆ ಕೊಡಬೇಕು ಎಂದು ಆಗ್ರಹಿಸಿದರು. ಇದಕ್ಕೆ ಉತ್ತರ ನೀಡಿದ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಜೆಸಿ ಮಾಧುಸ್ವಾಮಿ, 'ಪ್ರೋಟೀನ್ ಫುಡ್ ನಿಂದ ಸಮಸ್ಯೆ ಆದರೆ ಸಮಗ್ರ ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು' ಎಂದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಆರೋಗ್ಯ ಸಚಿವ ಡಾ. ಕೆ. ಸುಧಾಕರ್, 'ಫುಡ್ ಸೇಫ್ಟಿ ಇಲಾಖೆಯಿಂದ ಅನಧಿಕೃತವಾಗಿ ಪ್ರೊಟೀನ್ ಪೌಡರ್ ಸೇಲ್ ಮಾಡಿದರೆ ಕ್ರಮ ಕೈಗೊಳ್ಳುತ್ತೇವೆ. ಕೆಲವು ಪ್ರೊಟೀನ್ ಪೌಡರ್ ಒಳ್ಳೆಯ ಗುಣಮಟ್ಟ ಹೊಂದಿವೆ. ಎಫ್ ಎಸ್ ಎಸ್ ಎ ಐ ಅನುಮತಿ ಇಲ್ಲದೆ ಮಾರಾಟ ಮಾಡಿದರೆ ಕ್ರಮ ಕೈಗೊಳ್ಳುತ್ತೇವೆ' ಎಂದು‌ ಭರವಸೆ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com