ಹೆಚ್ ಎಎಲ್ ನಲ್ಲಿ ಏಕೀಕೃತ ಕ್ರಯೋಜನಿಕ್ ಇಂಜಿನ್ ಉತ್ಪಾದನಾ ಸೌಲಭ್ಯ: ರಾಷ್ಟ್ರಪತಿಗಳಿಂದ ಚಾಲನೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದು  ಹೆಚ್ ಎ ಎಲ್ ನಲ್ಲಿ ಏಕೀಕೃತ ಕ್ರಯೋಜನಿಕ್ ಇಂಜಿನ್ ಉತ್ಪಾದನಾ ಸೌಲಭ್ಯ ಮತ್ತು ದಕ್ಷಿಣ ವಲಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಯ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು.
ರಾಷ್ಟ್ರಪತಿ ದ್ರೌಪದಿ ಮುರ್ಮು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತಿತರರು
ರಾಷ್ಟ್ರಪತಿ ದ್ರೌಪದಿ ಮುರ್ಮು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತಿತರರು
Updated on

ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದು  ಹೆಚ್ ಎ ಎಲ್ ನಲ್ಲಿ ಏಕೀಕೃತ ಕ್ರಯೋಜನಿಕ್ ಇಂಜಿನ್ ಉತ್ಪಾದನಾ ಸೌಲಭ್ಯ ಮತ್ತು ದಕ್ಷಿಣ ವಲಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಯ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು.

ಈ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತಿತರರು ಉಪಸ್ಥಿತರಿದ್ದರು.

ನಂತರ ರಾಷ್ಟ್ರಪತಿ, ರಕ್ಷಣಾ ಕ್ಷೇತ್ರದಲ್ಲಿ ಆತ್ಮನಿರ್ಭರ ಭಾರತ ನಿರ್ಮಾಣದಲ್ಲಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಕೊಡುಗೆ ಅನನ್ಯವಾಗಿದೆ. ರಕ್ಷಣಾ ಪಡೆಗಳ ಹಿಂದಿನ ಶಕ್ತಿ ಹೆಚ್ ಎಎಲ್ ಎಂದು ಹೇಳಬಹುದು. ಕ್ರಯೋಜನಿಕ್ ಮತ್ತು ಸೆಮಿ ಕ್ರಯೋಜೆನಿಕ್ ಎಂಜಿನ್‌ಗಳನ್ನು ತಯಾರಿಸಲು ಅತ್ಯಾಧುನಿಕ ಸೌಲಭ್ಯ ಹೊಂದಿರುವುದು ಎಚ್‌ಎಎಲ್ ಮತ್ತು ಇಸ್ರೋಗೆ ಮಾತ್ರವಲ್ಲ, ಇಡೀ ದೇಶಕ್ಕೆ ನಿಜಕ್ಕೂ ಐತಿಹಾಸಿಕ ಕ್ಷಣವಾಗಿದೆ. ಈ ಪ್ರತಿಷ್ಠಿತ ಯೋಜನೆಗೆ ಸಂಬಂಧಿಸಿದ ಎಲ್ಲ ಜನರನ್ನು ಅಭಿನಂದಿಸುವುದಾಗಿ ತಿಳಿಸಿದರು.

ಇಸ್ರೋ ದೇಶದ ಹೆಮ್ಮೆಯಾಗಿದೆ. ಕ್ರಯೋಜನಿಕ್ ಎಂಜಿನ್ ಮತ್ತು ತಯಾರಿಕಾ ಸೌಲಭ್ಯ ಹೊಂದಿರುವ ವಿಶ್ವದ ಆರನೇ ರಾಷ್ಟ್ರವಾಗಿ ಭಾರತ ಹೊರಹೊಮ್ಮುವಲ್ಲಿ ಇಸ್ರೋ ಪ್ರಯತ್ನ ಮತ್ತು ಬದ್ಧತೆಯನ್ನು ರಾಷ್ಟ್ರಪತಿ ಶ್ಲಾಘಿಸಿದರು. ರಕ್ಷಣಾ ಕಾರ್ಯತಂತ್ರ ಮತ್ತು ಅಭಿವೃದ್ಧಿಯಲ್ಲಿ ಹೆಚ್ ಎಎಲ್ ಮತ್ತು ಇಸ್ರೋ ಕೊಡುಗೆ ಮಹತ್ವದ್ದಾಗಿದೆ. ದೇಶದ ರಕ್ಷಣಾ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳು ಮತ್ತು ವಿವಿಧ ಸಲಕರಣೆಗಳ ಅಭಿವೃದ್ಧಿಯಲ್ಲಿ ಈ ಎರಡೂ ಸಂಸ್ಥೆಗಳು ಮಹತ್ವದ ಪಾತ್ರ ನಿರ್ವಹಿಸುತ್ತಿವೆ. ದೇಶದಲ್ಲಿನ ವಿಜ್ಞಾನಿಗಳ ಸಮುದಾಯ ಸಾಮಾಜಿಕ ಜವಾಬ್ದಾರಿಯಲ್ಲಿ ದಾರಿಯಲ್ಲಿ ಸಾಗಬೇಕಾಗಿದೆ. ದೇಶಾದ್ಯಂತ ರಾಷ್ಟ್ರೀಯ ವೈರಾಲಜಿ ಸಂಸ್ಥೆಯ ವಿಸ್ತರಣೆಯಾಗಬೇಕಾಗಿದೆ ಎಂದು ರಾಷ್ಟ್ರಪತಿ ಕರೆ ನೀಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ರಾಷ್ಟ್ರಪತಿಗಳು ಹೇಳಿದಂತೆ ವೈರಾಲಜಿ ವಿಭಾಗದಲ್ಲಿ ಸಂಶೋಧನೆ ಹೆಚ್ಚಾಗಬೇಕಾಗಿದೆ. ಇಗರಿಂದಾಗಿ ಹೊಸದಾಗಿ ಹರಡುವ ರೋಗಗಳ ಬಗ್ಗೆ ತಿಳಿಯಲು ಅನುಕೂಲವಾಗಲಿದೆ. ಏರೋಸ್ಪೆಸ್ ಕ್ಷೇತ್ರದಲ್ಲಿ ಹೆಚ್ ಎಎಲ್ ಹೊಸ ಮೈಲುಗಲ್ಲು ಸಾಧಿಸಿದೆ.ಭಾರತಕ್ಕೆ ಬಾಹ್ಯಾಕಾಶವನ್ನು ಜಯಿಸಲು ವಿಪುಲ ಅವಕಾಶಗಳಿವೆ. ಭವಿಷ್ಯದ ಪೀಳಿಗೆ ಆರೋಗ್ಯಕರ ಜೀವನ ನಡೆಸಲು ಅನುವಾಗುವಂತೆ ಸಂಶೋಧನೆಗಳಾಗಬೇಕು ಎಂದರು. 

ರಾಜ್ಯದಲ್ಲಿ ಏರೋಸ್ಪೇಸ್, ಆರ್.ಅಂಡ್ ಡಿ, ರಕ್ಷಣಾ ನೀತಿಗಳು ಜಾರಿಯಲ್ಲಿದ್ದು, ಸರ್ಕಾರದ ವತಿಯಿಂದ ಈ ಎಲ್ಲಾ ಸಂಶೋಧನೆ ಗಳಿಗೆ ಅಗತ್ಯ ಸಹಕಾರವನ್ನು ನೀಡಲಿದೆ. ಕರ್ನಾಟಕ ಹೊಸ ವಿಜ್ಞಾನ, ಆವಿಷ್ಕಾರ ಹಾಗೂ ಹೊಸ ಪಥದತ್ತ ನಡೆಯುತ್ತಿದೆ. ನಮ್ಮ ಸರ್ಕಾರದ ಘೋಷವಾಕ್ಯವೂ ‘ನವ ಭಾರತಕ್ಕಾಗಿ ನವ ಕರ್ನಾಟಕ’ ಆಗಿದೆ ಎಂದು ತಿಳಿಸಿದರು.

ಆರೋಗ್ಯ ವಿಜ್ಞಾನದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಅತಿ ಹೆಚ್ಚಿನ ಸಂಶೋಧನಾ ಕೇಂದ್ರಗಳು, ವೈದ್ಯಕೀಯ ಸಂಸ್ಥೆಗಳು, ನಿಮ್ಹಾನ್ಸ್, ಕಿದ್ವಾಯಿ, ರಾಷ್ಟ್ರಮಟ್ಟದ ಮಕ್ಕಳ ಆಸ್ಪತ್ರೆಗಳು, ಆರ್ ಅಂಡ್ ಡಿ ಕೇಂದ್ರಗಳು, ಅಂಗಾಂಗ ಕಸಿ ಕೇಂದ್ರಗಳು ಇಲ್ಲಿವೆ. ಒಂದು ವರ್ಷ ದೊಳಗೆ 200 ಪ್ರಯೋಗಾಲಯಗಳನ್ನು ಆರ್.ಟಿ. ಪಿ.ಸಿ ಆರ್.ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಎನ್.ಐ.ವಿ, ದಕ್ಷಿಣ ವಲಯವು ತನ್ನ ಹೊಸ ಆವಿಷ್ಕಾರಗಳಿಂದ ದೇಶಕ್ಕೇ ಸಹಾಯ ಮಾಡಲಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com