ರಾಜ್ಯ

ಲೈಂಗಿಕ ದೌರ್ಜನ್ಯ ಪ್ರಕರಣ: ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅ.10ರ ವರೆಗೆ ವಿಸ್ತರಣೆ

ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನಕ್ಕೊಳಾಗಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 10ರ ವರೆಗೆ ವಿಸ್ತರಿಸಿ...

ಲೈಂಗಿಕ ದೌರ್ಜನ್ಯ ಪ್ರಕರಣ: ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅ.10ರ ವರೆಗೆ ವಿಸ್ತರಣೆ
ಮುರುಘಾ ಶ್ರೀಗಳು
Published On :

ಚಿತ್ರದುರ್ಗ: ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನಕ್ಕೊಳಾಗಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 10ರ ವರೆಗೆ ವಿಸ್ತರಿಸಿ ಕೋರ್ಟ್ ಆದೇಶಿಸಿದೆ.

ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಬಿ.ಕೆ. ಕೋಮಲಾ ಅವರು ಆರೋಪಿ ಸಂಖ್ಯೆ 2, ಹಾಸ್ಟೆಲ್ ವಾರ್ಡನ್ ರಶ್ಮಿ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಸಹ ಅಕ್ಟೋಬರ್ 10 ರವರೆಗೆ ವಿಸ್ತರಿಸಿದ್ದಾರೆ.

ಆರೋಪಿಯ ನ್ಯಾಯಾಂಗ ಬಂಧನ ಅವಧಿ ಇಂದು ಅಂತ್ಯಗೊಂಡ ಹಿನ್ನೆಲೆಯಲ್ಲಿ ಶ್ರೀಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ಕೋರ್ಟ್ ಅಕ್ಟೋಬರ್ 10ರ ವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. ನಂತರ ಶ್ರೀಗಳನ್ನು ಜಿಲ್ಲಾ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.