ಬಿಬಿಎಂಪಿ ಚುನಾವಣೆ 2022: ಅಂತಿಮ ಮತದಾರರ ಪಟ್ಟಿ ಪ್ರಕಟ

ಮುಂಬರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ 2022ರ ಚುನಾವಣೆ ಸಂಬಂಧ ರಾಜ್ಯ ಚುನಾವಣಾ ಆಯೋಗದ ಜುಲೈ 29 ರ ಆದೇಶದಂತೆ ವಾರ್ಡ್ ವಾರು ಮತದಾರರ ಪಟ್ಟಿಯನ್ನು ತಯಾರಿಸುವ ಸಂಬಂಧ ಸೂಚನೆ ಮತ್ತು ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
ಬಿಬಿಎಂಪಿ ಕಚೇರಿ
ಬಿಬಿಎಂಪಿ ಕಚೇರಿ
Updated on

ಬೆಂಗಳೂರು: ಮುಂಬರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ 2022ರ ಚುನಾವಣೆ ಸಂಬಂಧ ರಾಜ್ಯ ಚುನಾವಣಾ ಆಯೋಗದ ಜುಲೈ 29 ರ ಆದೇಶದಂತೆ ವಾರ್ಡ್ ವಾರು ಮತದಾರರ ಪಟ್ಟಿಯನ್ನು ತಯಾರಿಸುವ ಸಂಬಂಧ ಸೂಚನೆ ಮತ್ತು ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.

ಸೆಪ್ಟೆಂಬರ್ 9 ರವರೆಗಿನ ಮತದಾರರ ಮಾಹಿತಿಯನ್ನು ಒದಗಿಸಲಾಗಿದ್ದು, ಈ ಮಾಹಿತಿಯನ್ನು ಬಳಸಿಕೊಂಡು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಪೈಕಿ ಪಾಲಿಕೆಯ 243 ವಾರ್ಡ್​​​ಗಳಲ್ಲಿ ಒಟ್ಟು 71,19,563 ಮತದಾರರ ಹೆಸರನ್ನು ಅಂತಿಮಗೊಳಿಸಲಾಗಿದ್ದು, ಇದರಲ್ಲಿ 41,14,383 ಪುರುಷರು ಹಾಗೂ 38,03,747 ಮಹಿಳೆಯರು ಮತ್ತು 1433 ಇತರ ಮತದಾರರಿದ್ದಾರೆ. ಸಾರ್ವಜನಿಕರು ತಮ್ಮ ಹಾಗೂ ಕುಟುಂಬ ಸದಸ್ಯರ ಮಾಹಿತಿಯನ್ನು ಮತದಾರರ ಪಟ್ಟಿಯಲ್ಲಿ ಪರಿಶೀಲಿಸಿಕೊಳ್ಳಬಹುದಾಗಿದೆ ಎಂದು ಪಾಲಿಕೆ ಹೇಳಿದೆ.

ಅಂತಿಮ ಮತದಾರರ ಪಟ್ಟಿಯನ್ನು ಬಿಬಿಎಂಪಿ BBMP Website: bbmp.gov.in ನಲ್ಲಿ Upload ಮಾಡಲಾಗುವುದು ಹಾಗೂ ಎಲ್ಲಾ ಮತದಾರರ ನೊಂದಣಾಧಿಕಾರಿ/ಸಹಾಯಕ ಮತದಾರರ ನೊಂದಣಾಧಿಕಾರಿಗಳ ಕಛೇರಿಗಳಲ್ಲೂ ಹಾಗೂ ವಾರ್ಡ್ ಕಛೇರಿಗಳಲ್ಲೂ ಸಾರ್ವಜನಿಕರ ವೀಕ್ಷಣೆಗೆ ಮಾಹಿತಿ ಲಭ್ಯವಿರಿಸಲಾಗುತ್ತದೆ. ಮುಂದುವರೆದು, ಹೊಸದಾಗಿ ಮತದಾರರಾಗಿ ನೊಂದಾಯಿಸಿಕೊಳ್ಳಲು ಮೊಬೈಲ್ ಪ್ ಆದ Voter Helpline App ಮತ್ತು NVSP Portal ವೆಬ್‌ಸೈಟ್ ಮುಖೇನಾ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಸಾರ್ವಜನಿಕರು/ಮತದಾರರು ಸದುಪಯೋಗಪಡಿಸಿಕೊಳ್ಳಲು ಕೋರಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com