ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮತಾಂತರ ನಿಷೇಧ ಮಸೂದೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ!

ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಅನುಷ್ಠಾನಗೊಳಿಸುವ ಮತಾಂತರ ನಿಷೇಧ ಮಸೂದೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇಂದು ಅಂಕಿತ ಹಾಕಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಅನುಷ್ಠಾನಗೊಳಿಸುವ ಮತಾಂತರ ನಿಷೇಧ ಮಸೂದೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇಂದು ಅಂಕಿತ ಹಾಕಿದ್ದಾರೆ.

ಉಭಯ ಸದನಗಳಲ್ಲಿ ಅಂಗೀಕಾರಗೊಂಡಿದ್ದ ವಿಧೇಯಕಕ್ಕೆ ಇಂದು ರಾಜ್ಯಪಾಲರು ಅಂಕಿತ ಹಾಕಿದ್ದು ಈ ಮೂಲಕ ಬಲವಂತದ ಮತಾಂತರ ನಿಷೇಧಕ್ಕೆ ಇಂದಿನಿಂದ ಕಾಯ್ದೆ ರೂಪ ಸಿಕ್ಕಿದೆ.

ಧಾರ್ಮಿಕ ಸ್ವಾತಂತ್ರ‍್ಯ ಹಕ್ಕಿನ ರಕ್ಷಣೆಗಾಗಿ, ಬಲವಂತದ ಮತಾಂತರ, ಆಮಿಷ ಮತಾಂತರ ಮೂಲಕ ಒಂದು ಧರ್ಮದಿಂದ ಇನ್ನೊಂದು ಧರ್ಮಕ್ಕೆ ಕಾನೂನು ಬಾಹಿರವಾಗಿ ಮತಾಂತರ ಮಾಡುವುದನ್ನು ತಡೆಯಲು ಈ ನಿಯಮ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ವಿಧೇಯಕದಲ್ಲಿ ಹೇಳಲಾಗಿದೆ. 

ಕರ್ನಾಟಕ ಧಾರ್ಮಿಕ ಸ್ವಾತಂತ್ರ‍್ಯ ಹಕ್ಕು ಸಂರಕ್ಷಣಾ ವಿಧೇಯಕ 2022ನ್ನು ಈಚೆಗಷ್ಟೇ ವಿಧಾನ ಪರಿಷತ್ತಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಂಡಿಸಿದ್ದರು. ವಿಪಕ್ಷಗಳ ತೀವ್ರ ವಿರೋಧದ ಮಧ್ಯೆ ವಿಧಾನ ಪರಿಷತ್ತಿನಲ್ಲಿ ಮತಾಂತರ ನಿಷೇಧ ಮಸೂದೆ ಧ್ವನಿಮತದ ಮೂಲಕ ಅಂಗೀಕಾರಗೊಂಡಿತ್ತು. ಈ ಮಸೂದೆ ಪಾಸ್ ಆಗುವ ಹಂತದಲ್ಲಿ ಕಾಂಗ್ರೆಸ್‌ನ ಪ್ರಮುಖ ನಾಯಕರು ಸಭಾತ್ಯಾಗ ಮಾಡಿದ್ದರು.

Related Stories

No stories found.

Advertisement

X
Kannada Prabha
www.kannadaprabha.com