ನಡೆದಾಡಿದ ದೇವರ 115ನೇ ಜಯಂತ್ಯೋತ್ಸವ: ಬಸವ ಭಾರತ ಕಾರ್ಯಕ್ರಮ ಉದ್ಘಾಟಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ
ಸಿದ್ದಗಂಗಾ ಮಠದ ಹಿರಿಯ ಯತಿ ಡಾ ಶಿವಕುಮಾರ ಸ್ವಾಮೀಜಿಗಳ 115ನೇ ಜಯಂತಿ ಕಾರ್ಯಕ್ರಮ ಮಠದಲ್ಲಿ ಅದ್ದೂರಿಯಾಗಿ ನಡೆಯುತ್ತಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸಿದ್ದಾರೆ.
Published: 01st April 2022 12:16 PM | Last Updated: 01st April 2022 12:54 PM | A+A A-

ತುಮಕೂರಿನ ಸಿದ್ದಗಂಗಾ ಮಠದ ಬಸವ ಭಾರತ ವೇದಿಕೆಯಲ್ಲಿ ನಡೆದ ಕಾರ್ಯಕ್ರಮ
ತುಮಕೂರು: ಸಿದ್ದಗಂಗಾ ಮಠದ ಹಿರಿಯ ಯತಿ ಡಾ ಶಿವಕುಮಾರ ಸ್ವಾಮೀಜಿಗಳ 115ನೇ ಜಯಂತಿ ಕಾರ್ಯಕ್ರಮ ಮಠದಲ್ಲಿ ಅದ್ದೂರಿಯಾಗಿ ನಡೆಯುತ್ತಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸಿದ್ದಾರೆ.
ಇಂದು ಬೆಳಗ್ಗೆ ತುಮಕೂರಿಗೆ ಹೆಲಿಕಾಪ್ಟರ್ ನಲ್ಲಿ ಬೆಂಗಳೂರಿನಿಂದ ಬಂದಿಳಿದು ನಂತರ ರಸ್ತೆ ಮಾರ್ಗದ ಮೂಲಕ ಸಿದ್ದಗಂಗಾ ಮಠಕ್ಕೆ ತೆರಳಿ ಶಿವಕುಮಾರ ಸ್ವಾಮಿಗಳ ಗದ್ದುಗೆಗೆ ಪೂಜೆ ಸಲ್ಲಿಸಿದರು.
ಅಮಿತ್ ಶಾ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಆಗರ ಜ್ಞಾನೇಂದ್ರ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಹಲವಾರು ಬಿಜೆಪಿ ನಾಯಕರು ಹೂಗುಚ್ಛ ನೀಡಿ ಸ್ವಾಗತಿಸಿದರು.
ಕೇಂದ್ರ ಗೃಹ ಸಚಿವರಾದ ಶ್ರೀ @AmitShah ಅವರು ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಆಯೋಜಿಸಿರುವ ಡಾ.ಶ್ರೀಶ್ರೀಶ್ರೀ ಶಿವಕುಮಾರ ಮಹಾಸ್ವಾಮಿ ಅವರ 115ನೇ ಜಯಂತೋತ್ಸವ ಹಾಗೂ ಗುರವಂದನಾ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿದರು pic.twitter.com/7dE9YotxTT
— PIB in Karnataka (@PIBBengaluru) April 1, 2022
ಸಿದ್ದಗಂಗಾ ಮಠದಲ್ಲಿ ನಡೆದಾಡುವ ದೇವರ ಬಸವ ಭಾರತ ಹೆಸರಿನಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ಕೇಂದ್ರ ಸಚಿವರಾದ ಖೂಬಾ, ಸಂಸದ ಜಿ.ಎಸ್.ಬಸವರಾಜ್ ಹಾಗೂ ಸಿದ್ದಗಂಗಾ ಮಠದ ಸಿದ್ದಲಿಂಗೇಶ್ವರ ಸ್ವಾಮೀಜಿ ಸೇರಿದಂತೆ ಹಲವಾರು ಸಾಧು ಸಂತರು ಭಾಗವಹಿಸಿದ್ದಾರೆ.
Live : ತುಮಕೂರಿನ ಶ್ರೀ ಸಿದ್ದಗಂಗಾ ಮಠದ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ 115ನೇ ಜಯಂತಿ ಮತ್ತು ಗುರುವಂದನಾ ಮಹೋತ್ಸವ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಶ್ರೀ @AmitShah #KarnatakaWelcomesAmitShah https://t.co/CY2EVRPmZP
— BJP Karnataka (@BJP4Karnataka) April 1, 2022