ಚಿಕ್ಕಬಳ್ಳಾಪುರ: 400 ಹಾಸಿಗೆಗಳ ಆಸ್ಪತ್ರೆ, ವೈದ್ಯಕೀಯ ಕಾಲೇಜು ನಿರ್ಮಾಣ, ಕಾಮಗಾರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಶಂಕುಸ್ಥಾಪನೆ
ಚಿಕ್ಕಬಳ್ಳಾಪುರ ತಾಲ್ಲೂಕಿನ ಮುದ್ದೇನಹಳ್ಳಿಯ ಸತ್ಯ ಸಾಯಿ ಗ್ರಾಮದಲ್ಲಿ ಇಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಸತ್ಯ ಸಾಯಿ 400 ಹಾಸಿಗೆಗಳ ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆಯನ್ನು ನೇರವೇರಿಸಿದರು.
Published: 01st April 2022 06:03 PM | Last Updated: 01st April 2022 06:16 PM | A+A A-

ಆಸ್ಪತ್ರೆ, ವೈದ್ಯಕೀಯ ಕಾಲೇಜು ನಿರ್ಮಾಣ, ಕಾಮಗಾರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲ್ಲೂಕಿನ ಮುದ್ದೇನಹಳ್ಳಿಯ ಸತ್ಯ ಸಾಯಿ ಗ್ರಾಮದಲ್ಲಿ ಇಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಸತ್ಯ ಸಾಯಿ 400 ಹಾಸಿಗೆಗಳ ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆಯನ್ನು ನೇರವೇರಿಸಿದರು.
ಗೃಹ ಸಚಿವ ಅಮಿತ್ ಶಾ ರಾಜ್ಯ ಪ್ರವಾಸದಲ್ಲಿದ್ದು ಚಿಕ್ಕಬಳ್ಳಾಪುರದಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೂ ಶಂಕುಸ್ಥಾಪನೆ ನೆರವೇರಿದೆ.
ನೂತನ ವೈದ್ಯಕೀಯ ಕಾಲೇಜಿನ ಭೂಮಿ ಪೂಜೆ ಹಾಗೂ ಸಾರ್ವಜನಿಕ ಕಾರ್ಯಕ್ರಮ, ಸತ್ಯಸಾಯಿ ಗ್ರಾಮ, ಮುದ್ದೇನಹಳ್ಳಿ, ಚಿಕ್ಕಬಳ್ಳಾಪುರ. https://t.co/qzGn8xQtl0
— CM of Karnataka (@CMofKarnataka) April 1, 2022
ಕಾರ್ಯಕ್ರಮದಲ್ಲಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ರಾಜ್ಯ ಗೃಹ ಸಚಿವರಾದ ಅರಗ ಜ್ಞಾನೇಂದ್ರ, ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಟಿ.ಬಿ.ನಾಗರಾಜು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್ ಭಾಗಿಯಾಗಿದ್ದರು.
ಇದಕ್ಕೂ ಮುನ್ನ ಅಮಿತ್ ಶಾ ತುಮಕೂರು ಜಿಲ್ಲೆಗೆ ಭೇಟಿ ನೀಡಿ ಡಾ.ಶಿವಕುಮಾರಸ್ವಾಮಿಗಳ 115 ನೇ ವರ್ಷದ ಜಯಂತಿ ಕಾರ್ಯಕ್ರಮದ ಅಂಗವಾಗಿ ನಡೆದ ಗುರುವಂದನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.