ಕೇಂದ್ರದ ಮೋದಿ ಸರ್ಕಾರದಲ್ಲಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ, ಇದರ ವಿರುದ್ಧ ನಾವು ಹೋರಾಡುತ್ತೇವೆ: ಡಿ ಕೆ ಶಿವಕುಮಾರ್
ರಾಜ್ಯದಲ್ಲಿ ಯುಗಾದಿ-ಹೊಸತೊಡಕು ಸಂದರ್ಭದಲ್ಲಿ ನಡೆಯುತ್ತಿರುವ ಹಲಾಲ್ ಕಟ್ ಮಾಂಸ ವಿವಾದ ಬಗ್ಗೆ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಜಂಟಿ ಸುದ್ದಿಗೋಷ್ಠಿ ನಡೆಸಿ ಬಿಜೆಪಿ ಸರ್ಕಾರ ವಿರುದ್ಧ ಹರಿಹಾಯ್ದಿದ್ದಾರೆ.
Published: 03rd April 2022 03:22 PM | Last Updated: 03rd April 2022 03:28 PM | A+A A-

ಡಿ ಕೆ ಶಿವಕುಮಾರ್
ಬೆಂಗಳೂರು: ರಾಜ್ಯದಲ್ಲಿ ಯುಗಾದಿ-ಹೊಸತೊಡಕು ಸಂದರ್ಭದಲ್ಲಿ ನಡೆಯುತ್ತಿರುವ ಹಲಾಲ್ ಕಟ್ ಮಾಂಸ ವಿವಾದ ಬಗ್ಗೆ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಜಂಟಿ ಸುದ್ದಿಗೋಷ್ಠಿ ನಡೆಸಿ ಬಿಜೆಪಿ ಸರ್ಕಾರ ವಿರುದ್ಧ ಹರಿಹಾಯ್ದಿದ್ದಾರೆ.
ಯುಗಾದಿ ಹಬ್ಬ ಸಂದರ್ಭದಲ್ಲಿ ರಾಜ್ಯದ ಜನತೆಗೆ ಬೆಲ್ಲದ ಖುಷಿಯ ಸುದ್ದಿ ಕೊಡಬೇಕಾದ ಕೇಂದ್ರ ಸರ್ಕಾರ ಬೆಲೆ ಏರಿಕೆಯ ಗದಾಪ್ರಹಾರ ನಡೆಸುತ್ತಿದೆ. ಹಲಾಲ್, ಹಿಜಾಬ್ ಗಲಭೆ ಹಿಂದೆ ಬಿಜೆಪಿಯಿದ್ದು ಅನಗತ್ಯವಾಗಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ನೋಡುತ್ತಿದೆ ಎಂದು ಇಬ್ಬರೂ ನಾಯಕರು ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ ಕೆ ಶಿವಕುಮಾರ್, ಕೇಂದ್ರ ಸರ್ಕಾರವು ಬೆಲೆ ಏರಿಕೆ ಎಂಬ ಗದಾಪ್ರಹಾರವನ್ನು ಬಡವರ ವಿರುದ್ಧ ನಡೆಸುತ್ತಿದೆ. ಅಚ್ಛೇ ದಿನ್ ಕೊಡುತ್ತೇವೆಂದು ಹೇಳಿ ನರಕ ತೋರಿಸುತ್ತಿದ್ದಾರೆ. ಕೃಷಿ ಯಂತ್ರೋಪಕರಣಗಳ ಬೆಲೆಯೂ ಹೆಚ್ಚಳವಾಗಿದೆ. ಈ ಸರ್ಕಾರವನ್ನು ಕಿತ್ತೊಗೆಯುವವರೆಗೆ ಅಗತ್ಯ ವಸ್ತುಗಳ ಬೆಲೆ ಇಳಿಕೆ ಮಾಡುವವರೆಗೆ ಹೋರಾಟ ಮುಂದುವರಿಸುತ್ತೇವೆ ಎಂದು ಘೋಷಿಸಿದರು. ಜನರ ಆದಾಯ ಪಾತಾಳಕ್ಕೆ ಕುಸಿದಿದ್ದರೆ ಅಗತ್ಯ ವಸ್ತುಗಳ ಬೆಲೆ ಗಗನಮುಖಿಯಾಗಿದೆ ಎಂದು ಆರೋಪಿಸಿದರು.
ಯುಪಿಎ ಸರ್ಕಾರ ಇದ್ದ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೆಲೆ ಹೆಚ್ಚಳವಾದಾಗ ದೇಶೀಯ ಮಾರುಕಟ್ಟೆಯಲ್ಲಿ ಇಂಧನ, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯನ್ನು ಎಷ್ಟು, ಹೇಗೆ, ಯಾವಾಗ ಹೆಚ್ಚಳ ಮಾಡಬಹುದೆಂದು ಚರ್ಚೆ ನಡೆಸಿ ಯೋಚಿಸಿ ನಿರ್ಧಾರ ಮಾಡುತ್ತಿದ್ದರು. ಆ ದಾಟಿಯಲ್ಲಿ ಮಾಡಬೇಕೆ ಹೊರತು ಅವೈಜ್ಞಾನಿಕವಾಗಿ ಕೇಂದ್ರ ಬಿಜೆಪಿ ಸರ್ಕಾರ ಮಾಡುತ್ತಿದೆ ಎಂದು ಆರೋಪಿಸಿದರು.
ಇದನ್ನೂ ಓದಿ: ಹಲಾಲ್ ಸಾವಿರಾರು ವರ್ಷಗಳಿಂದ ನಡೆದುಕೊಂಡು ಬಂದಿರುವ ಪದ್ಧತಿ, ಅನಗತ್ಯ ವಿಚಾರಕ್ಕೆ ಸಮಾಜದಲ್ಲಿ ಅಶಾಂತಿ ಸೃಷ್ಟಿ: ಸಿದ್ದರಾಮಯ್ಯ