
ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯದ ಮಾಜಿ ಕುಸ್ತಿಪಟುಗಳ ಮಾಸಾಶವನ್ನು ಒಂದು ಸಾವಿರ ರೂಪಾಯಿ ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಬಜೆಟ್ ನಲ್ಲಿ ಘೋಷಿಸಿದಂತೆ ಮಾಜಿ ಕುಸ್ತಿಪಟುಗಳ ಮಾಸಾಶನವನ್ನು ಹೆಚ್ಚಿಸಲಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ತಿಳಿಸಿದ್ದಾರೆ.
50 ವರ್ಷ ಮೇಲ್ಪಟ್ಟ ಮಾಜಿ ಕುಸ್ತಿಪಟುಗಳ ಮಾಸಾಶನವನ್ನು ಒಂದು ಸಾವಿರ ರೂಪಾಯಿ ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ. ಏಪ್ರಿಲ್ ಒಂದರಿಂದಲೇ ಈ ಆದೇಶ ಜಾರಿಯಾಗಲಿದೆ ಎಂದು ಅವರು ಹೇಳಿದ್ದಾರೆ.
ರಾಜ್ಯ ಮಟ್ಟದ ಕುಸ್ತಿಪಟುಗಳಿಗೆ ರೂ. 2500 ರಿಂದ 3,500, ರಾಷ್ಟ್ರಮಟ್ಟದ ಕುಸ್ತಿಪಟುಗಳಿಗೆ ರೂ. 3,000ದಿಂದ ರೂ.4,000 ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕುಸ್ತಿಪಟುಗಳಿಗೆ ರೂ. 4,000ದಿಂದ ರೂ.5,000ಕ್ಕೆ ಹೆಚ್ಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.