ಹಿಜಾಬ್ ನಿಂದ ಆಜಾನ್ ಗೆ: ಮಸೀದಿಯಲ್ಲಿ ಧ್ವನಿವರ್ಧಕ ನಿರ್ಬಂಧಿಸಲು ಏ.13ರವರೆಗೆ ಸರ್ಕಾರಕ್ಕೆ ಹಿಂದೂಪರ ಸಂಘಟನೆಗಳ ಗಡುವು
ಮುಸ್ಲಿಂ ಹೆಣ್ಣುಮಕ್ಕಳು ಧರಿಸುವ ಹಿಜಾಬ್ ನಿಂದ ಆರಂಭವಾದ ವಿವಾದ ಈಗ ಆಜಾನ್ ವರೆಗೆ ಬಂದು ನಿಂತಿದೆ. ಯುಗಾದಿ ಸಂದರ್ಭದಲ್ಲಿ ಹಲಾಲ್ ಕಟ್ ಮಾಂಸಕ್ಕೆ ಅವಕಾಶ ನೀಡಬಾರದೆಂದು ಹಿಂದೂಪರ ಬಲಪಂಥೀಯ ಸಂಘಟನೆಗಳು ರಾಜ್ಯಾದ್ಯಂತ ಆಂದೋಲನ ಮಾಡಿದ್ದು ಇದೀಗ ಮಸೀದಿಯಲ್ಲಿ ಧ್ವನಿವರ್ಧಕ ಬಳಸಲು ಅವಕಾಶ ನೀಡದಂತೆ ಹಿಂದೂ ಸಂಘಟನೆಗಳು ಸರ್ಕಾರಕ್ಕೆ ಒತ್ತಾಯಿಸಿವೆ.
Published: 05th April 2022 11:38 AM | Last Updated: 05th April 2022 01:52 PM | A+A A-

ಮಸೀದಿಯಲ್ಲಿ ಸ್ಪೀಕರ್
ಬೆಂಗಳೂರು: ಮುಸ್ಲಿಂ ಹೆಣ್ಣುಮಕ್ಕಳು ಧರಿಸುವ ಹಿಜಾಬ್ ನಿಂದ ಆರಂಭವಾದ ವಿವಾದ ಈಗ ಆಜಾನ್ ವರೆಗೆ ಬಂದು ನಿಂತಿದೆ. ಯುಗಾದಿ ಸಂದರ್ಭದಲ್ಲಿ ಹಲಾಲ್ ಕಟ್ ಮಾಂಸಕ್ಕೆ ಅವಕಾಶ ನೀಡಬಾರದೆಂದು ಹಿಂದೂಪರ ಬಲಪಂಥೀಯ ಸಂಘಟನೆಗಳು ರಾಜ್ಯಾದ್ಯಂತ ಆಂದೋಲನ ಮಾಡಿದ್ದು ಇದೀಗ ಮಸೀದಿಯಲ್ಲಿ ಧ್ವನಿವರ್ಧಕ ಬಳಸಲು ಅವಕಾಶ ನೀಡದಂತೆ ಹಿಂದೂ ಸಂಘಟನೆಗಳು ಸರ್ಕಾರಕ್ಕೆ ಒತ್ತಾಯಿಸಿವೆ.
ಧ್ವನಿವರ್ಧಕದಿಂದ ಶಬ್ದ ಮಾಲಿನ್ಯವಾಗುತ್ತದೆ. ಹೀಗಾಗಿ ತಕ್ಷಣ ಈ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ರಾಜ್ಯ ಸರ್ಕಾರಕ್ಕೆ ಖಡಕ್ ಎಚ್ಚರಿಕೆ ನೀಡಿದ್ದು, ಏಪ್ರಿಲ್ 13ರವರೆಗೆ ಗಡುವು ನೀಡಿದ್ದಾರೆ. ಕೂಡಲೇ ಅಜಾನ್ ನಿರ್ಬಂಧ ಕೈಗೊಳ್ಳಬೇಕು. ಸರ್ಕಾರ ಕ್ರಮ ಕೈಗೊಳ್ಳದೆ ಹೋದರೆ ಉಗ್ರ ಹೋರಾಟ ಮಾಡುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ: ಆಜಾನ್ ವಿಚಾರದಲ್ಲಿ ಸರ್ಕಾರ ಯಾವುದೇ ಹೊಸ ಕಾನೂನು ತಂದಿಲ್ಲ, ಗೊಂದಲ ಸೃಷ್ಟಿಸುವುದು ಬೇಡ: ಸಿಎಂ ಬೊಮ್ಮಾಯಿ
ಬೃಹತ್ ಪ್ರತಿಭಟನೆಗೆ ನಿರ್ಧಾರ:
ಮಸೀದಿಗಳ ಮೇಲೆ ಮೈಕಾಸುರರ ಹಾವಳಿ ಬಹಳ ಜೋರಾಗಿದೆ. ಮಸೀದಿಗಳಲ್ಲಿ ನ್ಯಾಯಾಲಯದ ಆದೇಶ ಪಾಲನೆಯಾಗುತ್ತಿಲ್ಲ. ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಮೈಕ್ ಹಚ್ಚದಂತೆ ಆದೇಶ ಆದರೂ ಕೂಡ ಕೋರ್ಟ್ ಆದೇಶ ಪಾಲನೆಯಾಗುತ್ತಿಲ್ಲ. ಸರ್ಕಾರ ಕೂಡ ಈ ನಿಯಮವನ್ನು ಜಾರಿಗೆ ತರುತ್ತಿಲ್ಲ. ಮಸೀದಿಗಳು ಧ್ವನಿವರ್ಧಕ ಬಳಕೆಗೆ ಪರವಾನಗಿ ಪಡೆದಿಲ್ಲ ಎಂದು ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಹೇಳಿದ್ದು, ಏಪ್ರಿಲ್ 14ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ ಮಾಡುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ: ಮಸೀದಿಗಳಲ್ಲಿ ಧ್ವನಿವರ್ಧಕಗಳ ನಿಷೇಧಕ್ಕೆ ಭಜರಂಗದಳ, ಶ್ರೀರಾಮ ಸೇನೆ ಆಗ್ರಹ