ಬಳ್ಳಾರಿ: ವಾಲ್ಮೀಕಿ ಭವನದಲ್ಲಿ ಚರ್ಚ್ ಕಾರ್ಯಕ್ರಮ ನಿರ್ಬಂಧಕ್ಕೆ ಬಲಪಂಥೀಯ ಸಂಘಟನೆಗಳ ಒತ್ತಾಯ
ಜಿಲ್ಲೆಯ ವಾಲ್ಮೀಕಿ ಭವನದಲ್ಲಿ ನಿನ್ನೆ ಚರ್ಚ್ ಧಾರ್ಮಿಕ ಕಾರ್ಯಕ್ರಮ ನಡೆಸದಂತೆ ಕೆಲ ಬಲ ಪಂಥೀಯ ಸಂಘಟನೆ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಸ್ಥಳದಲ್ಲಿ ಕೆಲ ಕಾಲ ಪರಿಸ್ಥಿತಿ ಬಿಗಡಾಯಿಸಿತ್ತು.
Published: 06th April 2022 01:22 PM | Last Updated: 06th April 2022 01:28 PM | A+A A-

ಸಾಂದರ್ಭಿಕ ಚಿತ್ರ
ಬಳ್ಳಾರಿ: ಜಿಲ್ಲೆಯ ವಾಲ್ಮೀಕಿ ಭವನದಲ್ಲಿ ನಿನ್ನೆ ಚರ್ಚ್ ಧಾರ್ಮಿಕ ಕಾರ್ಯಕ್ರಮ ನಡೆಸದಂತೆ ಕೆಲ ಬಲ ಪಂಥೀಯ ಸಂಘಟನೆ ಕಾರ್ಯಕರ್ತರು ಆಕ್ಷೇಪಿಸಿದ್ದರಿಂದ ಸ್ಥಳದಲ್ಲಿ ಕೆಲ ಕಾಲ ಪರಿಸ್ಥಿತಿ ಬಿಗಡಾಯಿಸಿತ್ತು. ವಾಲ್ಮೀಕಿ ಭವನದಲ್ಲಿ ಇತರೆ ಧರ್ಮದವರು ಕಾರ್ಯಕ್ರಮ ಆಯೋಜಿಸಲು ಅವಕಾಶ ನೀಡಬಾರದು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ವಾಲ್ಮೀಕಿ ಭವನದಲ್ಲಿ ಚರ್ಚ್ ಧಾರ್ಮಿಕ ಕಾರ್ಯಕ್ರಮಕ್ಕೆ ಅವಕಾಶ ನೀಡದಂತೆ ಎರಡು ದಿನಗಳ ಹಿಂದೆಯೇ ಪ್ರತಿಭಟನಾಕಾರರು ಪೊಲೀಸರಿಗೆ ಮನವಿ ಮಾಡಿದ್ದರು. ಆಯೋಜಕರು ಮತಾಂತರದಲ್ಲಿ ತೊಡಗಿಸಿಕೊಳ್ಳಬಹುದೆಂದು ಅವರು ಆರೋಪಿಸಿದ್ದರು.
ಆದರೆ, ಮಧ್ಯ ಪ್ರವೇಶಿಸಿದ ಪೊಲೀಸರು ಕಾರ್ಯಕ್ರಮ ಸುಗಮವಾಗಿ ಸಾಗಲು ಅನುವು ಮಾಡಿಕೊಟ್ಟರು. ವಾಲ್ಮೀಕಿ ಭವನವನ್ನು ಇತರ ಧರ್ಮದವರಿಗೆ ನೀಡಬೇಕೆ ಅಥವಾ ಬೇಡವೇ ಎಂಬುದನ್ನು ಸರ್ಕಾರ ನಿರ್ಧರಿಸಲಿದೆ ಎಂದು ಪೊಲೀಸರು ಪ್ರತಿಭಟನಾಕಾರರಿಗೆ ತಿಳಿಸಿದರು.