ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ, ಶಾಂತಿ ಕಾಪಾಡುವುದು ಸರ್ಕಾರದ ಆದ್ಯತೆ: ಮುಖ್ಯಮಂತ್ರಿ ಬೊಮ್ಮಾಯಿ
ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
Published: 06th April 2022 11:30 AM | Last Updated: 06th April 2022 01:44 PM | A+A A-

ಮುಖ್ಯಮಂತ್ರಿ ಬೊಮ್ಮಾಯಿ
ನವದೆಹಲಿ: ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ನವದೆಹಲಿಯಲ್ಲಿಂದು ಹಲಾಲ್ ಮತ್ತು ಹಿಜಾಬ್ ವಿಚಾರಗಳ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ಧಾರ್ಮಿಕ ಮತ್ತು ಸಾಮಾಜಿಕ ಆಚರಣೆಗಳು ಧಾರ್ಮಿಕ ವಿಚಾರವಾಗಿದ್ದು, ಕಾನೂನು ಎಲ್ಲರಿಗೂ ಒಂದೇ, ಕಾನೂನಿಗೆ ಎಲ್ಲರೂ ತಲೆಬಾಗಿ ನಡೆಯಲೇಬೇಕು, ನಮ್ಮ ಸರ್ಕಾರ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಕಾಪಾಡಲು ಪ್ರಾಮುಖ್ಯತೆ ನೀಡುತ್ತದೆ ಎಂದು ಹೇಳಿದರು.
ಇದನ್ನೂ ಓದಿ: ಭದ್ರಾ ಮೇಲ್ದಂಡೆ: ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಕೇಂದ್ರ ಜಲಶಕ್ತಿ ಸಚಿವರ ಭರವಸೆ- ಸಿಎಂ ಬೊಮ್ಮಾಯಿ
ಸಮಾಜದಲ್ಲಿ ಶಾಂತಿ ಕಡುತ್ತಿರುವ ಬಗ್ಗೆ ಸರ್ಕಾರ ಕೈ ಕುಟ್ಟಿ ಕುಳಿತಿದೆ ಎಂಬ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆಗೆ ಉತ್ತರಿಸಿದ ಮುಖ್ಯಮಂತ್ರಿ, ಕುಮಾರಸ್ವಾಮಿ ಏನಾದರೂ ಅಂದುಕೊಳ್ಳಲಿ. ವೈಯಕ್ತಿಕ ವಿಚಾರಗಳನ್ನು ಜನ ತೀರ್ಮಾನಿಸುತ್ತಾರೆ. ಅದಕ್ಕೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದರು.
ಹಿಜಾಬ್ ವಿಚಾರದಲ್ಲಿ ನ್ಯಾಯಾಲಯದಲ್ಲಿ ಏನು ಹೇಳಬೇಕೋ ಅದನ್ನು ಹೇಳಿದ್ದೇವೆ. ಹಲವಾರು ವಿಚಾರಗಳು ಬಂದಾಗ ಅಧಿಕಾರಿಗಳಿಗೆ ಸೂಚನೆ ಕೊಟ್ಟು ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದೇವೆ. ಹೇಳಿಕೆ ಕೊಟ್ಟರಷ್ಟೇ ಆಡಳಿತ ಅಲ್ಲ. ಆಡಳಿತ ಮಾಡಲು ರೀತಿ ನೀತಿಗಳಿವೆ. ಅದರಂತೆ ನಾವು ಆಡಳಿತ ಮಾಡುತ್ತೇವೆ ಎಂದು ಅವರು ತಿಳಿಸಿದರು.